ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೈರೂತ್ ನಗರದ ಮೇಲೆ ಇಸ್ರೇಲ್‌ನ ಪಡೆಗಳು ವೈಮಾನಿಕ ದಾಳಿ ಮುಂದುವರಿಸಿವೆ.
ದಕ್ಷಿಣ ಲೆಬನಾನ್ ಬಳಿಕ ಹಿಜ್ಬುಲ್ಲಾ ಭಯೋತ್ಪಾದಕರ ಗುಂಪನ್ನು ಗುರಿಯಾಗಿಸಿ ಉತ್ತರ ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಟ್ರಿಪೋಲಿ ನಗರದ ಮೇಲೆ ದಾಳಿ ನಡೆಸಿ, ಹಮಾಸ್‌ನ ಚೀಫ್ ಕಮಾಂಡರ್ ಹಾಗೂ ಆತನ ಕುಟುಂಬವನ್ನು ಹತ್ಯೆಗೈದಿದೆ.
ಈ ಬೆನ್ನಲ್ಲೇ ಇಸ್ರೇಲ್ ಸೇನೆಯು ಇನ್ನಷ್ಟು ಪ್ರದೇಶಗಳ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿದ್ದು, ತಕ್ಷಣವೇ ಆ ಪ್ರದೇಶದ ನಿವಾಸಿಗಳು ಸ್ಥಳದಿಂದ ಎತ್ತಂಗಡಿ ಮಾಡುವಂತೆ ಎಚ್ಚರಿಸಿದೆ.
ಶುಕ್ರವಾರವಷ್ಟೇ ಹಿಜ್ಬುಲ್ಲಾ ಭಯೋತ್ಪಾದಕರನ್ನು ಹತ್ಯೆಗೈದಿರುವ ಬಗ್ಗೆ ಇಸ್ರೇಲ್ ಮಾಹಿತಿ ಹಂಚಿಕೊಂಡಿತ್ತು. ಕಳೆದ ಒಂದು ವಾರದಲ್ಲಿ ಇಸ್ರೇಲ್ ಹಿಜ್ಬುಲ್ಲಾದ 2,000ಕ್ಕೂ ಹೆಚ್ಚು ಸೇನಾ ನೆಲೆಗಳ ಗುರಿಯಾಗಿಸಿ ದಾಳಿ ನಡೆಸಿದ್ದು, 250ಕ್ಕೂ ಹೆಚ್ಚು ಮಂದಿಯನ್ನು ಹತ್ಯೆಗೈದಿದೆ. ಇದರಲ್ಲಿ 5 ಬೆಟಾಲಿಯನ್ ಕಮಾಂಡರ್, 10 ಕಂಪನಿ ಕಮಾಂಡರ್ ಹಾಗೂ 6 ಪ್ಲಟೂನ್ ಕಮಾಂಡರ್‌ಗಳನ್ನ ಕೊಂದಿರುವುದಾಗಿ ಹೇಳಿಕೊಂಡಿತ್ತು.