ಗಾಜಾ ಮೇಲೆ ಮತ್ತೆ ಇಸ್ರೇಲ್ ಏರ್ ಸ್ಟ್ರೈಕ್: ಹಮಾಸ್ ಸಂಘಟನೆ ಮುಖ್ಯಸ್ಥ ಮಹಮ್ಮದ್ ಸಿನ್ವರ್ ಸಾವು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಾಜಾಪಟ್ಟಿ ಮೇಲೆ ಇಸ್ರೇಲ್ ಸೇನೆ ವಾಯುದಾಳಿ ನಡೆಸಿದ್ದು, ಹಮಾಸ್ ಉಗ್ರ ಸಂಘಟನೆಯ ಮುಖ್ಯಸ್ಥ ಮಹಮ್ಮದ್ ಸಿನ್ವರ್ ನನ್ನೇ ಹೊಡೆದುರುಸಿದೆ .

ಇಸ್ರೇಲಿ ಭದ್ರತಾ ಪಡೆಗಳ ಮೂಲಗಳ ಪ್ರಕಾರ, ಹಮಾಸ್‌ನ ಹಿರಿಯ ನಾಯಕ ಮುಹಮ್ಮದ್ ಸಿನ್ವಾರ್ ನನ್ನು ಗುರಿಯಾಗಿಸಿಕೊಂಡು ಮಂಗಳವಾರ ಸಂಜೆ ದಕ್ಷಿಣ ಗಾಜಾ ನಗರದ ಖಾನ್ ಯೂನಿಸ್ ಆಸ್ಪತ್ರೆ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಪ್ರಬಲ ವೈಮಾನಿಕ ದಾಳಿ ನಡೆಸಿದೆ.

ಈ ಹಿಂದೆ ಇಸ್ರೇಲ್ ಪಡೆ ನಡೆಸಿದ್ದ ಡ್ರೋನ್ ದಾಳಿಯಲ್ಲಿ ಹಮಾಸ್ ಸಂಘಟನೆಯ ಅಂದಿನ ಮುಖ್ಯಸ್ಥ ಯಾಹ್ಯಾ ಸಿನ್ವರ್ ಹತನಾಗಿದ್ದ. ಅವನ ಸಾವಿನ ಬಳಿಕ ಹಮಾಸ್ ಉಗ್ರ ಸಂಘಟನೆಯ ನಾಯಕತ್ವವನ್ನು ಮಹಮದ್ ಸಿನ್ವರ್ ವಹಿಸಿಕೊಂಡಿದ್ದನು. .

ಈ ದಾಳಿಯಲ್ಲಿ ಆರು ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದು, ಕನಿಷ್ಠ 40 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ಟೀನಿಯನ್ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!