ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಗಾಜಾ ನಗರದ ಶಾಲೆಯೊಂದರ ಮೇಲೆ ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ.
ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ. ಸತ್ತವರಲ್ಲಿ 13 ಮಕ್ಕಳು ಮತ್ತು ಆರು ಮಹಿಳೆಯರು ಸೇರಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.
ಹಮಾಸ್‌ನ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಈ ಹಿಂದೆ ಶಾಲೆಯಾಗಿದ್ದ ಹಮಾಸ್ ಕಮಾಂಡ್ ಸೆಂಟರ್ ಮೇಲೆ ದಾಳಿ ನಡೆಸಲಾಗಿದೆ. ಹಮಾಸ್ ದುರುದ್ದೇಶದಿಂದ ಜನರ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ.
ಮಹಿಳೆಯರು ಮತ್ತು ಅವರ ಮಕ್ಕಳು ಶಾಲೆಯ ಆಟದ ಮೈದಾನದಲ್ಲಿ ಕುಳಿತಿದ್ದರು, ಮಕ್ಕಳು ಆಟವಾಡುತ್ತಿದ್ದರು, ಮತ್ತು ಇದ್ದಕ್ಕಿದ್ದಂತೆ ಎರಡು ರಾಕೆಟ್‌ಗಳು ಅವರನ್ನು ಹೊಡೆದವು ಎಂದು ಒಬ್ಬ ಪ್ರತ್ಯಕ್ಷದರ್ಶಿ ಅಲ್-ಮಲಾಹಿ ಹೇಳಿದರು.