ಸಿರಿಯಾದಲ್ಲಿರುವ ಇರಾನ್‌ ರಾಯಭಾರಿ ಕಚೇರಿ ಮೇಲೆ ಇಸ್ರೇಲ್‌ ದಾಳಿ: 11 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿರಿಯಾದಲ್ಲಿರುವ ಇರಾನ್‌ನ ರಾಯಭಾರಿ ಕಚೇರಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದ್ದು,11 ಮಂದಿ ಮೃತಪಟ್ಟಿದ್ದಾರೆ.

ಸಿರಿಯಾದಲ್ಲಿರುವ ಇರಾನ್‌ನ ಮಿಲಿಟರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಇನ್ನೊಬ್ಬ ಉನ್ನತ ಶ್ರೇಣಿಯ ಅಧಿಕಾರಿ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ಹಾದಿ ಹಾಜಿ ರಹೀಮಿ ಹಾಗೂ ಏಳು ಮಂದಿ ಸದಸ್ಯರು ಕೂಡ ಮೃತಪಟ್ಟಿದ್ದಾರೆ.

ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ದಾಳಿಗೆ ಕಠಿಣ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಹೇಳಿದೆ. ಈ ದಾಳಿಯಲ್ಲಿ ಯಾವುದೇ ನಾಗರಿಕರು ಮೃತಪಟ್ಟಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!