September 9, 2026
Wednesday, September 9, 2026
spot_img

ಲೆಬನಾನ್ ಮೇಲೆ ಮತ್ತೆ ಇಸ್ರೇಲ್ ದಾಳಿ: ಹಿಜ್ಬುಲ್ಲಾ ನಾಯಕ ಸೇರಿ 10 ಮಂದಿಯ ಹ*ತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೆಬನಾನ್‌ನ ಬೆಕಾ ಕಣಿವೆ ಮೇಲೆ ಮತ್ತೆ ಇಸ್ರೇಲ್ ದಾಳಿ ನಡೆಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ.

ಬಾಲ್‌ಬೆಕ್ ಪ್ರದೇಶದಲ್ಲಿರುವ ಹಿಜ್ಬುಲ್ಲಾ ಕಮಾಂಡ್ ಕೇಂದ್ರಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಮೃತರಲ್ಲಿ ಹಿಜ್ಬುಲ್ಲಾದ ಹಿರಿಯ ನಾಯಕನೊಬ್ಬ ಸೇರಿದ್ದಾನೆ ಎಂದು ಮೂಲಗಳು ತಿಳಿಸಿವೆ.

2024ರಲ್ಲಿ ಅಮೆರಿಕದ ಮಧ್ಯಸ್ಥಿಕೆಯ ಕದನ ವಿರಾಮಕ್ಕೆ ಇಸ್ರೇಲ್ ಮತ್ತು ಹಿಜ್ಬುಲ್ಲಾ ಒಪ್ಪಿಕೊಂಡವು. ಆದ್ರೆ ಎರಡೂ ಕಡೆಗಳಿಂದಲೂ ಮತ್ತೆ-ಮತ್ತೆ ಕದನ ವಿರಾಮ ಉಲ್ಲಂಘನೆ ನಡೆಯುತ್ತಿವೆ.

ಇಸ್ರೇಲ್‌ ಸೇನೆಯು, ದಕ್ಷಿಣ ಲೆಬನಾನ್‌ನ ಐನ್ ಅಲ್-ಹಿಲ್ವೆ ಪ್ರದೇಶದಲ್ಲಿ ಉಗ್ರಗಾಮಿಗಳು ಕಾರ್ಯ ನಿರ್ವಹಿಸುತ್ತಿದ್ದ ಹಮಾಸ್ ಕಮಾಂಡ್ ಸೆಂಟರ್ ಅನ್ನು ಹೊಡೆದುರುಳಿಸಿದೆ ಎಂದು ಹೇಳಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !