ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೆಹ್ರಾನ್‌ನಲ್ಲಿರುವ ಇರಾನಿನ ಸರ್ಕಾರಿ ಟಿವಿ ವಾಹಿನಿ IRIB ಕಚೇರಿಯ ಮೇಲೆಯೇ ಬಾಂಬ್ ದಾಳಿ ಇಸ್ರೇಲ್ ನಡೆಸಿದೆ.
ಐಆರ್‌ಐಬಿ ನಿರೂಪಕಿಯೊಬ್ಬರು ಇಸ್ರೇಲ್ ದಾಳಿ ಕುರಿತಂತೆ ಸುದ್ದಿ ಓದುತ್ತಿದ್ದರು. ಈ ಸಂದರ್ಭದಲ್ಲೇ ಐಆರ್‌ಬಿ ಕಟ್ಟಡದ ಮೇಲೆಯೇ ಇಸ್ರೇಲ್ ವಾಯುಸೇನೆ ಬಾಂಬ್ ದಾಳಿ ನಡೆಸಿದೆ.
ದಾಳಿ ಆಗುತ್ತಿದ್ದಂತೆ ನಿರೂಪಕಿ ಓಡಿ ಹೋಗಿದ್ದಾರೆ. ಗೋಡೆಗಳು ಉದುರುತ್ತಿರುವ ದೃಶ್ಯ ಸ್ಟುಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. 4 ದಿನಗಳ ಈ ಯುದ್ಧದಲ್ಲಿ ಎರಡೂ ಕಡೆ ಈವರೆಗೆ 224 ಮಂದಿ ಸಾವನ್ನಪ್ಪಿದ್ದು, 1,300ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
The Israeli Air Force has bombed the offices of Iran’s state broadcaster IRIB in Tehran a short while ago. Footage shows the moment of the attack. pic.twitter.com/PJUqx2njMg
— Emanuel (Mannie) Fabian (@manniefabian) June 16, 2025