ಇಸ್ರೇಲ್-ಹಮಾಸ್‌ ನಡುವೆ ಕದನ ವಿರಾಮ: ಮೊದಲ ಬ್ಯಾಚ್‌ನಲ್ಲಿ 13 ಒತ್ತೆಯಾಳುಗಳ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಸ್ರೇಲ್-ಹಮಾಸ್ ನಡುವಿನ ಯುದ್ದಕ್ಕೆ ನಾಲ್ಕು ದಿನಗಳ ಕದನ ವಿರಾಮ ಇಂದಿನಿಂದ ಆರಂಭಗೊಂಡಿದ್ದು, ಮೊದಲ ಬ್ಯಾಚ್‌ನಲ್ಲಿ 13 ಒತ್ತೆಯಾಳು ಸೇರಿದಂತೆ ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಕತಾರ್ ಹೇಳಿದೆ.

ಇಂದು ಬೆಳಿಗ್ಗೆ 7 ಗಂಟೆಯಿಂದ ಕದನ ವಿರಾಮ ಪ್ರಾರಂಭಗೊಂಡಿದ್ದು, ಮಹಿಳೆ ಮತ್ತು ಮಕ್ಕಳು ಸೇರಿದಂತೆ 13 ಮಂದಿ ಒತ್ತೆಯಾಳುಗಳನ್ನು ಸಂಜೆ 4 ಗಂಟೆ ವೇಳೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕತಾರ್‌ನ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್-ಅನ್ಸಾರಿ ತಿಳಿಸಿದ್ದಾರೆ.

ಬಿಡುಗಡೆ ಮಾಡಲು ನಿರ್ಧರಿಸಲಾಗಿರುವ ಪ್ಯಾಲೆಸ್ಟೀನ್‌ ಕೈದಿಗಳ ಪಟ್ಟಿಯನ್ನು ಇಸ್ರೇಲ್‌ ಗುಪ್ತಚರ ಇಲಾಖೆ ಬಿಡುಗಡೆ ಮಾಡಿದೆ ಎಂದು ಅನ್ಸಾರಿ ಹೇಳಿದ್ದಾರೆ.

ನಿರೀಕ್ಷೆಯಂತೆ ಈ ಪ್ರಕ್ರಿಯೆ ಗುರುವಾರ ಆರಂಭವಾಗಬೇಕಿತ್ತು. ಆದರೆ ಇಂದು ಈ ಪ್ರಕ್ರಿಯೆ ನಡೆಯುತ್ತಿದ್ದು, ಒತ್ತೆಯಾಳುಗಳ ಬಿಡುಗಡೆಗಾಗಿ ಬಂಡುಕೋರರ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಟ್ಜಾಚಿ ಹನೆಗ್ಬಿ ತಿಳಿಸಿದ್ದಾರೆ.

ಹಂತ ಹಂತವಾಗಿ ಹಮಾಸ್‌ ಬಂಡುಕೋರರಿಂದ 50 ಒತ್ತೆಯಾಳುಗಳ ಬಿಡುಗಡೆ ಹಾಗೂ ಪ್ರತಿಯಾಗಿ ಇಸ್ರೇಲ್‌ನಿಂದ 150 ಪ್ಯಾಲೆಸ್ಟೀನ್‌ ಕೈದಿಗಳ ಬಿಡುಗಡೆಗೆ ಒಪ್ಪಂದ ಆಗಿತ್ತು. ಅದರಂತೆಯೇ ನಿಗದಿತ ಸ್ಥಳದಲ್ಲೇ ಬಿಡುಗಡೆ ಕಾರ್ಯ ನಡೆಯಲಿದೆ ಎಂದು ಹನೆಗ್ಬಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!