ಇಸ್ರೇಲ್‌- ಹಮಾಸ್‌ ನಡುವೆ ಕದನ ವಿರಾಮ ಇನ್ನೆರಡು ದಿನ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಸ್ರೇಲ್‌ ಮತ್ತು ಹಮಾಸ್‌ ಉಗ್ರರ ನಡುವಿನ ಸಂಘರ್ಷಕ್ಕೆ ಇದೀಗ ಮತ್ತೆರಡು ದಿನಗಳ ಕದನ ವಿರಾಮ ವಿಸ್ತರಣೆಗೆ ಒಪ್ಪಿಗೆ ಸೂಚಿಸಿವೆ.

ನಾಲ್ಕು ದಿನಗಳ ತಾತ್ಕಾಲಿಕ ಕದನ ವಿರಾಮ ಸೋಮವಾರ ರಾತ್ರಿ ಮುಗಿದಿತ್ತು. ಇದರ ಬೆನ್ನಲ್ಲೇ ಕತಾರ್‌ ದೇಶದ ಮಧ್ಯಸ್ಥಿಕೆಯಲ್ಲಿ ಇದೀಗ ಕದನ ವಿರಾಮವನ್ನು ವಿಸ್ತರಿಸಲಾಗಿದೆ.

ಇಸ್ರೇಲ್‌ನೊಂದಿಗೆ ಮಾನವೀಯ ಕದನ ವಿರಾಮವನ್ನು ವಿಸ್ತರಿಸಲು ಕತಾರ್ ಮತ್ತು ಈಜಿಪ್ಟ್‌ನೊಂದಿಗೆ ಒಪ್ಪಿಕೊಂಡಿರುವುದಾಗಿ ಹಮಾಸ್ ಹೇಳಿದೆ. ಒಪ್ಪಂದದ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

ಕದನ ವಿರಾಮದ ವೇಳೆ ದಿನವೊಂದಕ್ಕೆ 10 ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು. ಇದಕ್ಕೆ ಪ್ರತಿಯಾಗಿ ಮೂರರಷ್ಟು ಪ್ಯಾಲೆಸ್ಟೀನ್‌ ಪ್ರಜೆಗಳನ್ನು ಬಿಡುಗಡೆ ಮಾಡುವುದಾಗಿ ಇಸ್ರೇಲ್‌ ಪುನರುಚ್ಚರಿಸಿದೆ.

ಇಸ್ರೇಲ್-ಹಮಾಸ್‌ ನಡುವಿನ ಕದನ ವಿರಾಮ

ಕತಾರ್ ಮತ್ತು ಈಜಿಪ್ಟ್​ ಮಧ್ಯಸ್ಥಿಕೆಯ ನಿರ್ಣಾಯಕ ಒಪ್ಪಂದದ ಭಾಗವಾಗಿ ನಾಲ್ಕು ದಿನಗಳ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಗೆ ನೀಡಿದೆ. ಈ ಒಪ್ಪಂದದ ಭಾಗವಾಗಿ 3 ಹಾಗೂ 1ರ ಅನುಪಾತದಲ್ಲಿ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಅಂದರೆ ಹಂತ, ಹಂತವಾಗಿ ಹಮಾಸ್‌ ಬಂಡುಕೋರರಿಂದ 50 ಒತ್ತೆಯಾಳುಗಳ ಬಿಡುಗಡೆ ಹಾಗೂ ಪ್ರತಿಯಾಗಿ ಇಸ್ರೇಲ್‌ನಿಂದ 150 ಪ್ಯಾಲೆಸ್ಟೀನ್‌ ಕೈದಿಗಳ ಬಿಡುಗಡೆ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!