ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್-ಪ್ಯಾಲೆಸ್ತೀನ್‌ನ ಹಮಾಸ್ ಉಗ್ರರ ನಡುವಿನ ಕದನ ಉಗ್ರ ರೂಪ ಪಡೆದಿದ್ದು, ಎರಡೂ ಕಡೆ ದಾಳಿ ಹೆಚ್ಚಾಗಿದೆ.
ಈವರೆಗೂ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಯುದ್ಧಪೀಡಿದ ಇಸ್ರೇಲ್‌ನಲ್ಲಿ ಕನ್ನಡಿಗರೂ ಸಿಲುಕಿದ್ದಾರೆ. ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಪ್ರತ್ಯೇಕ ಸಹಾಯವಾಣಿ ಆರಂಭಿಸಿದೆ.
ಇಸ್ರೇಲ್‌ನಲ್ಲಿ ಪರಿಸ್ಥಿತಿ ತೀವ್ರ ಹದಗೆಡುತ್ತಿರುವ ಹಿನ್ನೆಲೆ ಕನ್ನಡಿಗರ ರಕ್ಷಣೆಗೆ ಮುಂದಾಗಿದ್ದು, ಅವರಿಗಾಗಿಯೇ ಪ್ರತ್ಯೇಕ ಸಹಾಯವಾಣಿ ಆರಂಭಿಸಲಾಗಿದೆ.
ಇಸ್ರೇಲ್‌ನಲ್ಲಿ ಪರಿಸ್ಥಿತಿ ತೀವ್ರ ಹದಗೆಟ್ಟಿದೆ, ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ತೆರೆದಿದ್ದೇವೆ. ಇಸ್ರೇಲ್‌ನಲ್ಲಿ ನಿಮ್ಮ ಕುಟುಂಬದವರು ಯಾರಾದರೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದಾದರೆ ತಕ್ಷಣವೇ ನಮಗೆ ಕರೆ ಮಾಡಿ, ಪ್ರತೀ ಕನ್ನಡಿಗನ ರಕ್ಷಣೆಗೆ ನಾವು ಬದ್ಧ. ಅವರು ಜಗತ್ತಿನ ಯಾವ ಮೂಲೆಯಲ್ಲಿ ಇದ್ದರೂ ಅವರು ಕನ್ನಡಿಗರೇ ಎಂದು ರಾಜ್ಯ ಸರ್ಕಾರ ಹೇಳಿದೆ.
ಕೇಂದ್ರದ ತುರ್ತು ಸಹಾಯವಾಣಿ ಸಂಪರ್ಕ ಸಂಖ್ಯೆ ಹೀಗಿದೆ..
080 22340676, 080 22253707