ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಮಾಸ್ ದಾಳಿಗೆ ಇಸ್ರೇಲ್ ತಿರುಗೇಟು ನಿದ್ದು, ಗಾಜಾ ಪಟ್ಟಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ಪಡೆದುಕೊಂಡಿದೆ. ಅಷ್ಟೇ ಅಲ್ಲದೇ ನಿನ್ನೆ ರಾತ್ರಿಯಿಂದ ಗಾಜಾ ಪಟ್ಟಿಯಿಂದ ಯಾವುದೇ ದಾಳಿ ನಡೆದಿಲ್ಲ ಎಂದು ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ ನೆತನ್ಯಾಹು ಹೇಳಿಕೆ ನೀಡಿದ್ದಾರೆ.
ನಮ್ಮ ಸೇನೆ ಗಾಜಾ ಪಟ್ಟಿಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದೆ ಎಂದು ತಿಳಿಸಿದ್ದಾರೆ.
ಹಮಾಸ್ ಇಸ್ರೇಲ್ ಸಮುದಾಯಗಳ ಮೇಲೆ ವಿಧ್ವಂಸಕ ದಾಳಿ ಪ್ರಾರಂಭಿಸಿದ ನಂತರ ಹೋರಾಟವು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕನಿಷ್ಠ 900 ಇಸ್ರೇಲಿಗಳು ಕೊಲ್ಲಲ್ಪಟ್ಟರು. ಇಸ್ರೇಲಿ ಭದ್ರತಾ ಪಡೆ ನಡೆಸಿದ ಪ್ರತಿಕಾರದ ದಾಳಿಯಲ್ಲಿ ಗಾಜಾದಲ್ಲಿ ಇದಕ್ಕಿಂತ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ತೀನ್ ಅಧಿಕಾರಿಗಳು ತಿಳಿಸಿದ್ದಾರೆ.