ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ದಾಳಿ ಪರಿಣಾಮ ಈವರೆಗೆ 80 ಜನ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುಂಜಾನೆಯೇ ಉಭಯ ದೇಶಗಳು ಒಬ್ಬರ ಮೇಲೊಬ್ಬರು ಕ್ಷಿಪಣಿ ದಾಳಿ ನಡೆಸಿದ್ದಾರೆ. ಇಸ್ರೇಲಿ ರಕ್ಷಣಾ ಪಡೆಗಳು ಇರಾನಿನ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ ಮತ್ತು ಪರಮಾಣು ಸಿಸ್ಟಮ್ ಮೇಲೆ ಸರಣಿ ದಾಳಿ ನಡೆಸಿರುವುದಾಗಿ ಹೇಳಿಕೊಂಡಿವೆ.
ಟೆಹ್ರಾನ್‌ನಲ್ಲಿರುವ ಶಹರಾನ್ ತೈಲ ಸಂಗ್ರಹಾಗಾರವನ್ನು ಇಸ್ರೇಲ್ ಟಾರ್ಗೆಟ್ ಮಾಡಿದೆ ಎಂದು ಇರಾನ್ ಹೇಳಿದೆ. ಇಸ್ರೇಲಿ ನಗರಗಳ ಮೇಲೆ ಇರಾನ್ ಕೂಡ ದಾಳಿಗಳನ್ನು ನಡೆಸಿದೆ.
ಶುಕ್ರವಾರ ಇರಾನ್ ತನ್ನ ಪ್ರತಿಕಾರದ ದಾಳಿಯನ್ನು ಪ್ರಾರಂಭಿಸಿದ ನಂತರ ಇಸ್ರೇಲ್‌ನಲ್ಲಿ ಇದುವರೆಗೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.