ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಹೆಚ್ಚಾಗಿದ್ದು, ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ 24×7 ಸಹಾಯವಾಣಿಯನ್ನು ಆರಂಭಿಸಿದೆ.
ಭಾರತೀಯ ಪ್ರಜೆಗಳ ಸುರಕ್ಷತೆಯ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಯಾವುದೇ ತುರ್ತು ಸಂದರ್ಭ ಎದುರಾದರೆ, ಆರಂಭಿಸಿರುವ ಸಹಾಯವಾಣಿಯನ್ನು ಸಂಪರ್ಕಿಸುವಂತೆ ರಾಯಭಾರ ಕಚೇರಿ ಎಕ್ಸ್‌ನಲ್ಲಿ ತಿಳಿಸಿದೆ.
ಸಹಾಯವಾಣಿ ಸಂಖ್ಯೆ +972 54-7520711 +972 54-3278392, ಇಮೇಲ್ [email protected], ಆಗಿದ್ದು, ಇಸ್ರೇಲ್‌ನಲ್ಲಿರುವ ಭಾರತೀಯರು ಅಗತ್ಯವಿರುವ ಸಮಯದಲ್ಲಿ ಕರೆ ಮಾಡುವಂತೆ ತಿಳಿಸಲಾಗಿದೆ.