March 31, 2026
Tuesday, March 31, 2026
spot_img

ಇಸ್ರೇಲ್–ಇರಾನ್ ಯುದ್ಧ: ದುಬೈನಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ತೀವ್ರವಾಗುತ್ತಿರುವ ಹಿನ್ನೆಲೆ ವಿದೇಶದಲ್ಲಿರುವ ಭಾರತೀಯರು ಆತಂಕಕ್ಕೊಳಗಾಗಿದ್ದಾರೆ. ಅದರಲ್ಲೂ ದುಬೈನಲ್ಲಿ ವಾಸಿಸುತ್ತಿದ್ದ ಹಲವಾರು ಕನ್ನಡಿಗರು ಮುಂಜಾಗ್ರತಾ ಕ್ರಮವಾಗಿ ತಾಯ್ನಾಡಿಗೆ ಮರಳಲು ಆರಂಭಿಸಿದ್ದಾರೆ.

ಭಾನುವಾರ ರಾತ್ರಿ ದುಬೈನಿಂದ ಹೊರಟ ಎಮಿರೇಟ್ಸ್ ವಿಮಾನದಲ್ಲಿ 288 ಮಂದಿ ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದ್ದಾರೆ. ಈಗಾಗಲೇ ಸುಮಾರು 2 ಸಾವಿರಕ್ಕೂ ಹೆಚ್ಚು ಮಂದಿ ಭಾರತಕ್ಕೆ, ಅದರಲ್ಲೂ ಬೆಂಗಳೂರಿಗೆ ಮರಳಿರುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

ಒಟ್ಟಾರೆ ದೊಡ್ಡ ಮಟ್ಟದ ಸಮಸ್ಯೆ ಕಾಣಿಸದಿದ್ದರೂ, ಮಧ್ಯಪ್ರಾಚ್ಯದ ಪರಿಸ್ಥಿತಿ ಯಾವಾಗ ಬದಲಾಗುತ್ತದೆ ಎಂಬ ಅನಿಶ್ಚಿತತೆಯಿಂದ ಹಲವರು ಮುನ್ನೆಚ್ಚರಿಕೆಯಾಗಿ ಭಾರತಕ್ಕೆ ಮರಳುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !