May 22, 2026
Friday, May 22, 2026
spot_img

ಇಸ್ರೇಲ್-ಇರಾನ್ ವಾರ್ ಎಫೆಕ್ಟ್: ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನಗಳ ಹಾರಾಟ ಸ್ಥಗಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಯುದ್ಧದ ಭೀತಿಯು ಇದೀಗ ಕರಾವಳಿಯ ವಿಮಾನಯಾನದ ಮೇಲೆ ನೇರ ಪರಿಣಾಮ ಬೀರಿದೆ. ಇರಾನ್ ವಾಯುಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈ ಸೇರಿದಂತೆ ವಿವಿಧ ಗಲ್ಫ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಹಲವು ವಿಮಾನಗಳನ್ನು ಹಠಾತ್ ರದ್ದುಗೊಳಿಸಲಾಗಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತು ಇಂಡಿಗೋ ಸಂಸ್ಥೆಯ ಪ್ರಮುಖ ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ. ವಿದೇಶಕ್ಕೆ ತೆರಳಲು ಸಜ್ಜಾಗಿದ್ದ ನೂರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಅನಿವಾರ್ಯವಾಗಿ ಉಳಿಯುವಂತಾಗಿದೆ.

ಗೊಂದಲ ನಿವಾರಿಸಲು ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮುನ್ನ ಆಯಾ ವಿಮಾನಯಾನ ಸಂಸ್ಥೆಗಳಿಂದ ಅಧಿಕೃತ ಮಾಹಿತಿ ಪಡೆದುಕೊಳ್ಳುವಂತೆ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ವಿಮಾನಯಾನ ಸಂಸ್ಥೆಗಳ ಅಧಿಕೃತ ವೆಬ್‌ಸೈಟ್‌ಗಳನ್ನು ಗಮನಿಸಲು ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !