Sunday, December 3, 2023

Latest Posts

ಗಾಜಾ ಶಿಬಿರದ ಮೇಲೆ ಇಸ್ರೇಲ್ ವಾಯು ದಾಳಿ: 30 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಸಂಘರ್ಷ ಮುಂದುವರೆದಿದ್ದು, ಹಮಾಸ್ ಉಗ್ರರನ್ನು ನಿರ್ನಾಮ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್‌ ಪಣತೊಟ್ಟಿದೆ. ಅದರಂತೆ ಶನಿವಾರ ತಡರಾತ್ರಿ ಸೆಂಟ್ರಲ್ ಗಾಜಾದ ಶಿಬಿರವೊಂದರ ಮೇಲೆ ನಡೆಸಿದ ವಾಯು ದಾಳಿಯಲ್ಲಿ ಸುಮಾರು 30 ಮಂದಿ ಸಾವಿಗೀಡಾಗಿದ್ದಾರೆ ಎಂದು ಹಮಾಸ್‌ ಆರೋಗ್ಯ ಸಚಿವಾಲಯ ತಿಳಿಸಿದೆ.

ಸೆಂಟ್ರಲ್‌ ಗಾಜಾ ಪಟ್ಟಿಯಲ್ಲಿರುವ ಅಲ್-ಮಘಾಝಿ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 30 ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ದೇರ್ ಅಲ್-ಬಾಲಾಹ್‌ನಲ್ಲಿರುವ ಅಲ್-ಅಕ್ಸಾ ಮಾರ್ಟಿಯರ್ಸ್‌ ಆಸ್ಟತ್ರೆಗೆ ಸಾಗಿಸಲಾಗಿದೆ. ಈ ವೈಮಾನಿಕ ದಾಳಿಯಿಂದಾಗಿ ಹಲವು ಮನೆಗಳು ನೆಲಕ್ಕುರುಳಿವೆ ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ತಿಳಿಸಿದ್ದಾರೆ.

ಹಮಾಸ್ ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಇಸ್ರೇಲ್ ನಾಗರಿಕರ ಮನೆಗಳ ಮೇಲೆ ನೇರವಾಗಿ ದಾಳಿ ಮಾಡಿದ್ದು, ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಇದ್ದಾರೆ ಎಂದು ಹೇಳಿದೆ.

ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿ, 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಹಮಾಸ್‌ ಅನ್ನು ನಾಶ ಮಾಡುತ್ತೇವೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!