ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಭೀಕರ ಸಂಘರ್ಷ ನಡೆಯುತ್ತಿದ್ದು, ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಈ ದಾಳಿಯಲ್ಲಿ 80ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್ ಹೇಳಿದೆ.
ನಬ್ಲುಸ್ ನಗರದಲ್ಲಿರುವ ಬಲಾಟ ಶಿಬಿರದ ಮೇಲೆ ಇಸ್ರೇಲ್ ದಾಳಿ ಮಾಡಿದೆ. ಆದರೆ ಈ ಕುರಿತು ಇಸ್ರೇಲ್ ಪ್ರತಿಕ್ರಿಯೆ ನೀಡಿಲ್ಲ.
ವಿಶ್ವಸಂಸ್ಥೆಯ ಅಂಕಿ-ಅಂಶಗಳ ಪ್ರಕಾರ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಆರಂಭವಾದಾಗಿನಿಂದ ವೆಸ್ಟ್ ಬ್ಯಾಂಕ್ನಲ್ಲಿ 51 ಮಕ್ಕಳು ಸೇರಿದಂತೆ ಕನಿಷ್ಠ 186 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ.
ಹಮಾಸ್ ಉಗ್ರರನ್ನು ನಿರ್ನಾಮ ಮಾಡಲು ಪಣ ತೊಟ್ಟಿರುವ ಇಸ್ರೇಲ್, ಗಾಜಾದ ಮೇಲೆ ವೈಮಾನಿಕ ದಾಳಿ ನಡೆಸುತ್ತಿದೆ. ಇದರಿಂದಾಗಿ ಗಾಜಾ ಪಟ್ಟಿಯಲ್ಲಿ 11,500 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಇವರಲ್ಲಿ ಸುಮಾರು 4,710 ಮಕ್ಕಳು ಮತ್ತು 3160 ಮಹಿಳೆಯರು ಸೇರಿದ್ದಾರೆ. ಇಸ್ರೇಲ್‌ನ ಕ್ರಮಕ್ಕೆ ಹಲವು ದೇಶಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಕದನ ವಿರಾಮಕ್ಕೆ ಒತ್ತಾಯಿಸಿವೆ.