Wednesday, August 10, 2022

Latest Posts

ಗಾಜಾದ ಮೇಲೆ ಇಸ್ರೇಲ್​ ವಾಯು ದಾಳಿ: 13 ಅಂತಸ್ತಿನ ದೂರದರ್ಶನ ಕಟ್ಟಡ ನೆಲಸಮ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್​ ನಡುವಿನ ಯುದ್ಧ ಮುಂದುವರೆದಿದ್ದು, ಅಲ್ಲಿನ ಸುದ್ದಿವಾಹಿನಿ ಗುರಿಯಾಗಿಸಿಕೊಂಡು ನಡೆದಿರುವ ವೈಮಾನಿಕ ದಾಳಿಯಲ್ಲಿ 13 ಅಂತಸ್ತಿನ ಕಟ್ಟಡ ಸಂಪೂರ್ಣವಾಗಿ ನೆಲಸಮವಾಗಿದೆ.
ಕತಾರ್​ ಮೂಲದ ಅಲ್​-ಜಜೀರಾ ದೂರದರ್ಶನ ಮತ್ತು ಅಮೆರಿಕದ ಸುದ್ದಿ ಸಂಸ್ಥೆಯ 13 ಮಹಡಿ ಕಟ್ಟಡ ಸಂಪೂರ್ಣವಾಗಿ ನೆಲಸಮವಾಗಿದ್ದು, ಇದರಲ್ಲಿ ಅನೇಕ ಅನೇಕ ಅಂತಾರಾಷ್ಟ್ರೀಯ ಪತ್ರಿಕಾ ಕಚೇರಿಗಳಿದ್ದವು ಎಂದು ತಿಳಿದು ಬಂದಿದೆ.
ಇದಕ್ಕೆ ಸಂಬಂಧಿಸಿದಂತೆ ಅಲ್​ ಜಜೀರಾ ಟ್ವೀಟ್ ಮೂಲಕ ಮಾಹಿತಿ ಸಹ ಹಂಚಿಕೊಂಡಿದೆ. ದಾಳಿ ಮಾಡುವುದಕ್ಕೂ ಒಂದು ಗಂಟೆ ಮುಂಚಿತವಾಗಿ ಎಚ್ಚರಿಕೆ ಸಹ ನೀಡಲಾಗಿತ್ತು ಎಂದು ಇಸ್ರೇಲ್ ಗುಪ್ತಚರ ಇಲಾಖೆ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಸೋಮವಾರದಿಂದ ಗಾಜಾದ ಮೇಲೆ ಇಸ್ರೇಲ್​ ನಿರಂತರವಾಗಿ ವಾಯು ದಾಳಿ ನಡೆಸುತ್ತಿದ್ದು, ಇದರಲ್ಲಿ 39 ಮಕ್ಕಳು ಸೇರಿ 139 ಜನರು ಸಾವನ್ನಪ್ಪಿದ್ದಾರೆ. ಇದರ ಮಧ್ಯೆ ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದಾಗಿ ತಿಳಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss