ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಲೆಬನಾನ್ನಲ್ಲಿರುವ ಪ್ಯಾಲೆಸ್ತೀನಿಯರ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ.
ಒಂದು ವರ್ಷದ ಹಿಂದೆ ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮದ ನಂತರ ಲೆಬನಾನ್ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಕರಾವಳಿ ನಗರ ಸಿಡಾನ್‌ನ ಹೊರವಲಯದಲ್ಲಿರುವ ಐನ್ ಎಲ್-ಹಿಲ್ವೆ ನಿರಾಶ್ರಿತರ ಶಿಬಿರದಲ್ಲಿರುವ ಮಸೀದಿಯ ಪಾರ್ಕಿಂಗ್ ಸ್ಥಳದಲ್ಲಿ ಡ್ರೋನ್ ದಾಳಿ ನಡೆದಿದೆ.
ಇಸ್ರೇಲ್ ಮತ್ತು ಅದರ ಸೈನ್ಯದ ವಿರುದ್ಧ ದಾಳಿಗೆ ಸಿದ್ಧತೆ ನಡೆಸುತ್ತಿದ್ದ ಹಮಾಸ್ ತರಬೇತಿ ಆವರಣದ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಹಮಾಸ್ ಗುಂಪು ಎಲ್ಲೆಲ್ಲಿ ಕಾರ್ಯನಿರ್ವಹಿಸುತ್ತಿದೆಯೋ ಅಲ್ಲೆಲ್ಲಾ ಅದರ ವಿರುದ್ಧ ಇಸ್ರೇಲ್ ಸೇನೆಯು ಕಾರ್ಯಾಚರಣೆ ಮುಂದುವರಿಸಲಿದೆ ಎಂದು ಅದು ಹೇಳಿದೆ.
ಕಳೆದ ಎರಡು ವರ್ಷಗಳಲ್ಲಿ, ಲೆಬನಾನ್ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಉಗ್ರಗಾಮಿ ಹಿಜ್ಬುಲ್ಲಾ ಗುಂಪಿನ ಹಲವಾರು ಅಧಿಕಾರಿಗಳು ಹಾಗೂ ಹಮಾಸ್ನ ಸದಸ್ಯರು ಸಾವನ್ನಪ್ಪಿದ್ದಾರೆ.

