ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಜಾ ಮೇಲೆ ಇಸ್ರೇಲಿ ವಾಯುದಾಳಿ ಆಹಾರಕ್ಕಾಗಿ ಕಾಯುತ್ತಿದ್ದ 94 ಮಂದಿ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದಕ್ಷಿಣ ಗಾಜಾದಲ್ಲಿ ಸ್ಥಳಾಂತರಗೊಂಡ ಜನರು ಮಲಗಿದ್ದಾಗ ರಾತ್ರಿಯ ಸಮಯದಲ್ಲಿ ಟೆಂಟ್ ಶಿಬಿರದ ಮೇಲೆ ನಡೆದ ದಾಳಿಗೆ 12 ವರ್ಷದೊಳಗಿನ ಕನಿಷ್ಠ ಆರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 13 ಸದಸ್ಯರು ಸಾವನ್ನಪ್ಪಿದ್ದಾರೆ.
ಗಾಜಾ ಪಟ್ಟಿಯ ಜನರಿಗೆ ಆಹಾರ ಒದಗಿಸಲು ಇಸ್ರೇಲ್ ಬೆಂಬಲದೊಂದಿಗೆ ಹೊಸದಾಗಿ ರಚಿಸಲಾದ ಅಮೆರಿಕನ್ ಸಂಘಟನೆಯಾದ ಗಾಜಾ ಹ್ಯುಮಾನಿಟೇರಿಯನ್ ಫೌಂಡೇಶನ್ ಕೆಲಸ ಮಾಡುತ್ತಿದೆ.