ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿ 35 ಮಂದಿ ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ತೀನಿಯನ್ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಹಮಾಸ್ ರಾಕೆಟ್ ದಾಳಿಯ ನಂತರ, ಇಸ್ರೇಲ್ ರಾಫಾ ಮೇಲೆ ದೊಡ್ಡ ವೈಮಾನಿಕ ದಾಳಿ ನಡೆಸಿದೆ.ಇಸ್ರೇಲಿ ವಾಯುಪಡೆಯು ದೊಡ್ಡ ಭಯೋತ್ಪಾದಕರು ಇರುವ ಭಯೋತ್ಪಾದಕ ಸಂಘಟನೆ ಹಮಾಸ್ನ ರಫಾ ಸಂಕೀರ್ಣವನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ.
ದಾಳಿಯಲ್ಲಿ ವೆಸ್ಟ್ ಬ್ಯಾಂಕ್ ಪ್ರಧಾನ ಕಚೇರಿಯ ಮುಖ್ಯಸ್ಥ ಯಾಸಿನ್ ರಬಿಯಾ ಮತ್ತು ಇನ್ನೊಬ್ಬ ಭಯೋತ್ಪಾದಕ ಕಮಾಂಡರ್ ಖಾಲಿದ್ ನಜ್ಜಾರ್ ಹತರಾಗಿದ್ದಾರೆ.
ಇಸ್ರೇಲಿ ಬಾಂಬ್ ದಾಳಿಯಲ್ಲಿ 35 ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ಹೇಳಿದೆ. ಶೆಲ್ ದಾಳಿಯ ಪರಿಣಾಮವಾಗಿ ಈ ಪ್ರದೇಶದಲ್ಲಿ ಹಲವಾರು ನಾಗರಿಕರು ಗಾಯಗೊಂಡಿದ್ದಾರೆ.