ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಪತ್ರಕರ್ತರ ಸುರಕ್ಷತೆ ಖಾತರಿಪಡಿಸಲಾಗದು ಎಂದ ಇಸ್ರೇಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಮಾಸ್ ಉಗ್ರರನ್ನು ಹತ್ತಿಕ್ಕುವ ಪಣತೊಟ್ಟಿರುವ ಇಸ್ರೇಲ್ ಸೇನೆ ಗಾಜಾ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಗಳ ಮಧ್ಯೆ ಪತ್ರಕರ್ತರ ಜೀವದ ಸುರಕ್ಷತೆಯನ್ನು ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಇಸ್ರೇಲ್ ಸೇನಾಪಡೆ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳಾದ ರಾಯಿಟರ್ಸ್ ಹಾಗೂ ಏಜೆನ್ಸ್ ಫ್ರಾನ್ಸ್ ಪ್ರೆಸ್ ಪತ್ರಕರ್ತರ ಸುರಕ್ಷತೆ ಬಗ್ಗೆ ಮಾಹಿತಿ ನೀಡಿ ಎಂದು ಇಸ್ರೇಲ್ ಸೇನೆಯನ್ನು ಮನವಿ ಮಾಡಿದ್ದು, ಇಸ್ರೇಲ್ ಇದಕ್ಕೆ ಉತ್ತರ ನೀಡಿದೆ.

ಹಮಾಸ್ ಉಗ್ರರು ಬೇಕಂತಲೇ ನಾಗರಿಕರು, ಪತ್ರಕರ್ತರು ಇರುವ ಸ್ಥಳಗಳಲ್ಲಿ ಅಡಗಿ ಕುಳಿತಿದ್ದಾರೆ, ಉಗ್ರರು ಇರುವ ಜಾಗಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಇದರಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಅಥವಾ ಪತ್ರಕರ್ತರ ಸಾವಿಗೂ ಕಾರಣವಾಗಬಹುದು, ಅವರ ಸುರಕ್ಷತೆಯನ್ನು ಖಾತ್ರಿ ಪಡಿಸಲು ಆಗುವುದಿಲ್ಲ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!