ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜ್ಬುಲ್ಲಾ ಉಗ್ರಗಾಮಿ ಪಡೆಯ ವಿರುದ್ಧ ಹೋರಾಡುತ್ತಿರುವ ಇಸ್ರೇಲ್ ಸೋಮವಾರ ಲೆಬನಾನ್‌ನ ಮೇಲೆವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 274 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಪ್ರಕಟಣೆಯಲ್ಲಿ ತಿಳಿಸಿದೆ.
ನಾವು ಲೆಬನಾನ್‌ನಲ್ಲಿ ನಮ್ಮ ದಾಳಿಯನ್ನು ತೀವ್ರಗೊಳಿಸುತ್ತಿದ್ದೇವೆ. ಉತ್ತರದ ನಿವಾಸಿಗಳನ್ನು ಸುರಕ್ಷಿತವಾಗಿ ಅವರ ಮನೆಗಳಿಗೆ ಹಿಂದಿರುಗಿಸುವ ನಮ್ಮ ಗುರಿಯನ್ನು ಸಾಧಿಸುವವರೆಗೆ ಈ ಕ್ರಮಗಳು ಮುಂದುವರಿಯುತ್ತವೆ. ಇಂದು ೮೦೦ ಟಾರ್ಗೆಟ್ ಮೇಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ.
ಅಕ್ಟೋಬರ್‌ನಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ ಲೆಬನಾನ್ ಮೇಲೆ ನಡೆದ ಅತ್ಯಂತ ಮಾರಣಾಂತಿಕ ದಾಳಿ ಇದಾಗಿದ್ದು, ದಾಳಿಯಲ್ಲಿ 21 ಮಕ್ಕಳು ಸೇರಿದಂತೆ 274 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.