ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್‌ ಪಡೆ ದಾಳಿ: 20ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಕಾರ್ಯಕರ್ತರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಸ್ರೇಲಿ ಪಡೆಗಳು ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದು 20 ಪ್ಯಾಲೆಸ್ತೀನ್ ಕಾರ್ಯಕರ್ತರು ಈ ದಾಳಿಯಲ್ಲಿ ಬಲಿಯಾಗಿದ್ದಾರೆ.

ಇಸ್ರೇಲಿ ಪಡೆಗಳು ಟ್ಯಾಂಕರ್‌ಗಳು ಮತ್ತು ಫಿರಂಗಿಗಳೊಂದಿಗೆ ಆಸ್ಪತ್ರೆಯನ್ನು ಸುತ್ತುವರಿದು ಗುಂಡಿನ ದಾಳಿ ನಡೆಸಿದವು ಎಂದು ಆಸ್ಪತ್ರೆಯಲ್ಲಿ ಆಶ್ರಯ ಪಡೆದವರು ಹೇಳಿದ್ದಾರೆ. ಸಶಸ್ತ್ರ ಪಡೆಗಳು ಕಟ್ಟಡಗಳ ಮೇಲೆ ದಾಳಿ ಮಾಡಿ ಅನೇಕ ಜನರನ್ನು ಬಂಧಿಸಿವೆ ಎಂದು ತಿಳಿಸಿದೆ.

ಕಾರ್ಯಾಚರಣೆಯ ಸಮಯದಲ್ಲಿ, 200 ಕ್ಕೂ ಹೆಚ್ಚು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದೇವೆ ಮತ್ತು ಅವರು ಪ್ರಸ್ತುತ ತನಿಖೆಯಲ್ಲಿದ್ದಾರೆ. ನಾವು ಆಸ್ಪತ್ರೆಯ ಸಂಕೀರ್ಣದಲ್ಲಿ 20 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿದ್ದೇವೆ ಎಂದು ಇಸ್ರೇಲಿ ಮಿಲಿಟರಿ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ದೂರದರ್ಶನದ ಮೂಲಕ ಹೇಳಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!