ಹೊಸದಿಗಂತ ಡಿಜಿಟಲ್ ಡೆಸ್ಕ್;
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದ್ದಾರೆ.
ಈ ವೇಳೆ ಪ್ರಧಾನಿ ಮೋದಿ ಅವರು ಭಯೋತ್ಪಾದನೆಯ ಬಗ್ಗೆ ಭಾರತ ಶೂನ್ಯ ಸಹಿಷ್ಣುತೆಯನ್ನು ಪುನರುಚ್ಚರಿಸಿದ್ದಾರೆ. ಈ ವೇಳೆ ಭಯೋತ್ಪಾದನೆ ಮತ್ತು ಗಾಜಾ ಶಾಂತಿ ಯೋಜನೆಯ ಬಗ್ಗೆ ಇಬ್ಬರೂ ನಾಯಕರು ಚರ್ಚಿಸಿದ್ದಾರೆ. ಗಾಜಾ ಶಾಂತಿ ಯೋಜನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.
ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಮುಂದುವರಿದ ಬೆಳವಣಿಗೆಯ ಬಗ್ಗೆ ಮೋದಿ ಮತ್ತು ನೆತನ್ಯಾಹು ತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಗಾಜಾ ಶಾಂತಿ ಯೋಜನೆಯ ಆರಂಭಿಕ ಅನುಷ್ಠಾನ ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ಶಾಂತಿಯನ್ನು ಸ್ಥಾಪಿಸುವ ಪ್ರಯತ್ನಗಳಿಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.
ಯುಎಸ್ ಬೆಂಬಲಿತ ಗಾಜಾ ಕದನ ವಿರಾಮ ಯೋಜನೆಯ ಎರಡನೇ ಹಂತವು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ನಿರೀಕ್ಷಿಸುವುದಾಗಿ ನೆತನ್ಯಾಹು ಹೇಳಿದ ನಂತರ ಅವರು ಮೋದಿಗೆ ಕರೆ ಮಾಡಿದ್ದಾರೆ. ಆದರೆ, ನೆತನ್ಯಾಹು ಈ ಹೇಳಿಕೆ ನೀಡಿದ್ದರೂ ಇಸ್ರೇಲ್ ದೇಶದ ಉಲ್ಲಂಘನೆಗಳು ಮುಂದುವರಿದಿರುವುದರಿಂದ ಕದನ ವಿರಾಮ ಯೋಜನೆ ಮುಂದುವರಿಯಲು ಸಾಧ್ಯವಿಲ್ಲ ಎಂದು ಹಮಾಸ್ ಹೇಳಿದೆ.

