ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಲದಿಂದ ಮಾತ್ರ ಶಾಂತಿ ಸ್ಥಾಪಿಸಲು ಸಾಧ್ಯ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಅಮೆರಿಕವು ಇರಾನ್ ಮೇಲೆ ನಡೆಸಿದ ವಾಯು ದಾಳಿ ಕುರಿತು ನೆತನ್ಯಾಹು ಸಂತಸ ವ್ಯಕ್ತಪಡಿಸಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕಕ್ಕೆ ಧನ್ಯವಾದ ಅರ್ಪಿಸಿದ್ದು. ಅಮೆರಿಕ ನಿಜವಾಗಿಯೂ ವಿಶಿಷ್ಟವಾಗಿದೆ. ಭೂಮಿಯ ಮೇಲಿನ ಯಾವುದೇ ದೇಶ ಮಾಡಲು ಸಾಧ್ಯವಾಗದ ಕೆಲಸವನ್ನು ಮಾಡಿದೆ ಎಂದು ಹೇಳಿದ್ದಾರೆ.
ಒಂದೊಮ್ಮೆ ನೀವು ಕೂಡ ಇಷ್ಟಕ್ಕೆ ಸುಮ್ಮನಾದರೆ ಸರಿ ಏನಾದರೂ ಪ್ರತೀಕಾರ ತೀರಿಸಿಕೊಳ್ಳಲು ಬಯಸಿದರೆ ಇದಕ್ಕಿಂತ ದೊಡ್ಡ ದಾಳಿಯನ್ನು ಎದುರಿಸಬೇಕಾದೀತು ಎಂದು ಟ್ರಂಪ್ ಈಗಾಗಲೇ ಇರಾನ್ಗೆ ಎಚ್ಚರಿಕೆ ನೀಡಿದ್ದಾರೆ.