April 30, 2026
Thursday, April 30, 2026
spot_img

ಲೆಬನಾನ್ ಮೇಲೆ ಇಸ್ರೇಲ್ ಭೀಕರ ದಾಳಿ: ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಕ್ಕೆ ಅಲ್ಪ ವಿರಾಮ ಘೋಷಣೆಯಾಗಿದ್ದು, ಆದರೆ ಇಸ್ರೇಲ್ ಮಾತ್ರ ಲೆಬನಾನ್ ಮೇಲಿನ ದಾಳಿಯನ್ನು ಮುಂದುವರಿಸಿದ್ದು, 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಘಟನೆ ಕುರಿತು ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.

ಈ ಕುರಿತು ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದು, ಲೆಬನಾನ್‌ನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಜನರ ಸಾವು, ನೋವುಗಳ ವರದಿ ಕಂಡು ಆಘಾತಗೊಂಡಿದ್ದೇವೆ. ಭಾರತವು ಸದಾ ಜನರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಹೇಳಿದರು.

ಯಾವುದೇ ರಾಷ್ಟ್ರವಾಗಲಿ ಅಂತಾರಾಷ್ಟ್ರೀಯ ಕಾನೂನನ್ನು ಪಾಲಿಸುವುದು ಅತೀ ಮುಖ್ಯ. ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಭಾರತ ಸರಕಾರವು ಲೆಬನಾನ್‌ನಲ್ಲಿರುವ ರಾಯಭಾರ ಕಚೇರಿಯ ಜೊತೆ ಸಂಪರ್ಕದಲ್ಲಿದ್ದು, ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಭದ್ರತೆಗೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !