ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯ ಆಯ್ಕೆ ಶಿಫಾರಸ್ಸಿಗೆ ವಿವಿ ಕುಲಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದಾರೆ. ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.
ನಾಳೆ ಘಟಿಕೋತ್ಸವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ನಾಳೆ ಕರ್ನಾಟಕ ಬಂದ್ ಕಾರಣ ಕಾರ್ಯಕ್ರಮವನ್ನು ಮುಂದೂಡಲಾಗಿದೆ.