ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಇಸ್ರೋ ಸಜ್ಜು: ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಇಸ್ರೋ, ಗಗನಯಾನ ಮಿಷನ್‌ಗಾಗಿ ಮಾನವರಹಿತ ಹಾರಾಟ ಪರೀಕ್ಷೆಗಳನ್ನು ಇಸ್ರೋ ಪ್ರಾರಂಭಿಸಲಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದೆ.

ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ.ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ.ಕ್ರೂ ಎಸ್ಕೇಪ್‌ ಸಿಸ್ಟಮ್‌ ಗಗನಯಾನ ಯೋಜನೆಯ ಬಹುದೊಡ್ಡ ಅಂಶವಾಗಿದ್ದು, ಡೈನಮಿಕ್‌ ಪ್ರಶೆರ್‌ ಹಾಗೂ ಟ್ರಾನ್ಸಾನಿಕ್‌ ಕಂಡೀಶನ್‌ಗಳಲ್ಲಿಯೂ ಈ ವ್ಯವಸ್ಥೆ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ಅದರ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಿಕೊಳ್ಳುವ ಉದ್ದೇಶವನ್ನು ಪರೀಕ್ಷಾರ್ಥ ಉಡಾವಣೆ ಹೊಂದಿದೆ.

 

ಒಟ್ಟು 4 ಪರೀಕ್ಷಾರ್ಥ ಉಡಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯದಲ್ಲಿ ಟಿವಿ-ಡಿ1 ಎನ್ನುವ ಪರೀಕ್ಷಾರ್ಥ ವಾಹನ ಉಡಾವಣೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!