Friday, September 29, 2023

Latest Posts

‘ಚಂದ್ರಯಾನ-3’ ನೌಕೆ ಸೆರೆ ಹಿಡಿದ ಮೊದಲ ಚಿತ್ರ ಪ್ರಧಾನಿ ಮೋದಿಗೆ ಉಡುಗೊರೆ ಕೊಟ್ಟ ಇಸ್ರೋ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೊವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೋ ವಿಜ್ಞಾನಿಗಳು ಉಡುಗೊರೆಯಾಗಿ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ಶನಿವಾರ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೊವನ್ನು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರು ಉಡುಗೊರೆಯಾಗಿ ನೀಡಿದ್ದಾರೆ.

ಆ.23 ರಂದು ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಯಶಸ್ವಿಯಾಗಿ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲ್ಮೈ ಚಿತ್ರವನ್ನು ತೆಗೆದಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!