ಇಸ್ರೋದಲ್ಲಿ 526 ಹುದ್ದೆಗಳ ನೇಮಕಾತಿ

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಭಾರತದಲ್ಲೆಡೆ 526 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಜನವರಿ 18,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಜನವರಿ 9,2023ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಠ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/-ರೂ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಆಯ್ಕೆ ಮಾಡಲಾಗುವುದು.

ಸಾಮಾನ್ಯ / ಓಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳು 100/- ರೂ. ಶುಲ್ಕವನ್ನು ಆಫ್‌ಲೈನ್ ಮೂಲಕ ಪಾವತಿಸಬಹುದು. ಮಹಿಳೆ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು ಸಂಪೂರ್ಣ ಶುಲ್ಕ ವಿನಾಯಿತಿ ಹೊಂದಿರುತ್ತಾರೆ.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಸ್ರೋ ಅಧಿಕೃತ ವೆಬ್‌ಸೈಟ್‌ https://www.isro.gov.in/ ಗೆ ಭೇಟಿ ನೀಡಿ. ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 18,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!