JOB | ಇಸ್ರೋದಲ್ಲಿ ಉದ್ಯೋಗಾವಕಾಶ…ಮೇ.24ರೊಳಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಲ್ಲಿ 65 ವಿಜ್ಞಾನಿ/ಇಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ/ಬಿ.ಟಿಕೆ ವಿದ್ಯಾರ್ಹತೆಯುಳ್ಳ ಮತ್ತು ಮೇ 24,2023ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿಜ್ಞಾನಿ/ಇಂಜಿನಿಯರ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 250/-ರೂ ಅರ್ಜಿಶುಲ್ಕವನ್ನು ಆನ್‌ಲೈನ್‌/ಚಲನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!