SHOCKING | ಇಸ್ರೋ ವಿಜ್ಞಾನಿ ಕಾರಿಗೆ ಕಲ್ಲೆಸೆತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನಲ್ಲಿ ಇಸ್ರೋ ವಿಜ್ಞಾನಿಯ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದಿದ್ದು, ಹಿಂಬದಿಯ ಗಾಜು ಪುಡಿಪುಡಿಯಾಗಿದೆ.

ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವಿಜ್ಞಾನಿ ಆಶುತೋಷ್ ಸಿಂಗ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆಗಸ್ಟ್ 24ರ ಮಧ್ಯರಾತ್ರಿ 12:45ಕ್ಕೆ ಮನೆಗೆ ಹಿಂದಿರುಗುತ್ತಿದ್ದೆ. ಈ ವೇಳೆ ಗೂಂಡಾಗಳು ನನ್ನ ಕಾರ್‌ನ್ನು ಹಿಂಬಾಲಿಸಿದ್ದಾರೆ. ಕಾರನ್ನು ತಡೆದು ಹಿಂಭಾಗದ ಗಾಜನ್ನು ಒಡೆದುಹಾಕಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಠಾಣೆಯಲ್ಲಿ ದೂರು ನೀಡಿದಾಗ ಪೊಲೀಸರು ನಿರ್ಲಕ್ಷ್ಯ ತೋರಿಸಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!