ಚಂದ್ರಯಾನ-3 ಕೌಂಟ್‌ಡೌನ್‌ಗೆ ದನಿಯಾಗಿದ್ದ ಇಸ್ರೋ ವಿಜ್ಞಾನಿ ವಲಮರ್ತಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಂದ್ರಯಾನ-3 ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲಮರ್ತಿ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಚಂದ್ರಯಾನ ಕೌಂಟ್‌ಡೌನ್ ಮೇಲೆ ಇಡೀ ವಿಶ್ವದ ಕಣ್ಣು ನೆಟ್ಟಿತ್ತು. ಕೌಂಟ್‌ಡೌನ್ ಹೇಳಿದ್ದ ಧ್ವನಿ ವಲಮರ್ತಿ ಅವರದ್ದು. ಆರ್‌ಐಎಸ್‌ಎಟಿ-1ರ ಪ್ರಾಜೆಕ್ಟ್ ಡೈರೆಕ್ಟರ್ ಆಗಿದ್ದ ವಲಮರ್ತಿ ಅವರು ಅಬ್ದುಲ್ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದರು.

ಭವಿಷ್ಯದ ಮಿಷನ್‌ಗಳ ಕೌಂಟ್‌ಡೌನ್‌ಗೆ ವಲಮರ್ತಿ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3 ಅಂತಿಮ ಕೌಂಟ್‌ಡೌನ್ ಘೋಷಣೆಯಾಗಿತ್ತು. ಅವರ ಅನಿರೀಕ್ಷಿತ ಸಾವು ನಮ್ಮೆಲ್ಲರಿಗೂ ಅತೀವ ದುಃಖ ತಂದಿದೆ ಎಂದು ಇಸ್ರೋದ ಮಾಜಿ ನಿರ್ದೇಶಕ ಡಾ.ಪಿ.ವಿ. ವೆಂಕಟಕೃಷ್ಣನ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!