ಇಸ್ರೋ ಸಾಧನೆ ವಿಜ್ಞಾನದಲ್ಲಿ ಹೊಸ ಎತ್ತರ ತಲುಪುವ ನಮ್ಮ ಸಂಕಲ್ಪ: ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮ್ಮ ಮಾಸಿಕ ಆಕಾಶವಾಣಿಯ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ಮೋದಿ ಇಸ್ರೋ ಯಶಸ್ಸಿನ ಕುರಿತು ಮಾತನಾಡಿದ್ದಾರೆ.

ಬಾಹ್ಯಾಕಾಶ ವಲಯದಲ್ಲಿ ನಮ್ಮ ಯಶಸ್ಸಿನ ಪಟ್ಟಿ ಹೆಚ್ಚುತ್ತಿದ್ದು, ಉಡಾವಣಾ ವಾಹನಗಳ ತಯಾರಿಕೆಯಾಗಿರಲಿ, ಚಂದ್ರಯಾನ, ಮಂಗಳಯಾನ, ಆದಿತ್ಯ ಎಲ್ -1ರ ಯಶಸ್ಸಾಗಿರಲಿ ಅಥವಾ ಒಂದೇ ರಾಕೆಟ್‌ನಿಂದ ಒಂದೇ ಬಾರಿಗೆ 104 ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಅಭೂತಪೂರ್ವ ಧ್ಯೇಯವಾಗಿರಲಿ. ಇಸ್ರೋ (ISRO) ಯಶಸ್ಸಿನ ವ್ಯಾಪ್ತಿ ವಿಶಾಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

10 ವರ್ಷಗಳಲ್ಲಿ ಸುಮಾರು 460 ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ. ಇವುಗಳಲ್ಲಿ ಇತರ ದೇಶಗಳ ಅನೇಕ ಉಪಗ್ರಹಗಳು ಸಹ ಸೇರಿವೆ. ಕಳೆದ ತಿಂಗಳು ದೇಶವು ಇಸ್ರೋದ 100ನೇ ರಾಕೆಟ್ ಉಡಾವಣೆಗೆ ಸಾಕ್ಷಿಯಾಯಿತು. ಇದು ಕೇವಲ ಒಂದು ಸಂಖ್ಯೆಯಲ್ಲ. ಪ್ರತಿದಿನ ಬಾಹ್ಯಾಕಾಶ ವಿಜ್ಞಾನದಲ್ಲಿ ಹೊಸ ಎತ್ತರವನ್ನು ಮುಟ್ಟುವ ನಮ್ಮ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!