Saturday, August 13, 2022

Latest Posts

ಲಡಾಖ್’ನ ಗಡಿ ಸಮಸ್ಯೆ ಶೀಘ್ರ ಬಗೆಹರಿಸಲು ಭಾರತ-ಚೀನಾ ಮಿಲಿಟರಿ ಅಧಿಕಾರಿಗಳ ಒಪ್ಪಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪೂರ್ವ ಲಡಾಖ್ ನಲ್ಲಿನ ವಾಸ್ತವ ಗಡಿ ನಿಯಂತ್ರಣ ರೇಖೆಯುದ್ದಕ್ಕೂ(ಎಲ್‌ಎಸಿ) ಇರುವ ಸಮಸ್ಯೆಗಳ ಬಗ್ಗೆ ಭಾರತದ ವಿದೇಶಾಂಗ ಸಚಿವ ಎಸ್. ಜಯಶಂಕರ್ ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ತಜಿಕಿಸ್ತಾನದ ದುಶಾಂಬೆಯಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳ ವಿದೇಶಾಂಗ ಸಚಿವರು, ಎಲ್‌ಎಸಿ ಗಡಿಯಲ್ಲಿನ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದರು.
ಈ ವೇಳೆ ಬಾಕಿ ಇರುವ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವುದಾಗಿ ಸೇನಾಧಿಕಾರಿಗಳು ಹಾಗೂ ರಾಜತಾಂತ್ರಿಕ ಅಧಿಕಾರಿಗಳು ಸಮ್ಮತಿ ಸೂಚಿಸಿದ್ದಾರೆ. ಏಷ್ಯಾದ ಒಗ್ಗಟ್ಟು ಉಭಯ ದೇಶಗಳ ಸಂಬಂಧದ ಮೇಲೆ ಅವಲಂಬಿತವಾಗಿದ್ದು, ಭಾರತ ಯಾವುದೇ ನಾರಿಕತೆಯ ಸಂಘರ್ಷವನ್ನು ಪ್ರತಿಪಾದಿಸಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss