ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಮನ್ಸ್ ಜಾರಿ: ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಕಾರಣ ವಿಚಾರಣೆಗೆ ಹಾಜರಾಗುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ. ಈ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ನಾಳೆ(ಮೇ 24) ರಂದು ನಡೆಯುವ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ.
ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಜನವರಿ ಹಾಗೂ ಫೆಬ್ರವರಿಯಲ್ಲಿ ಎರಡು ಹಂತದಲ್ಲಿ ತಲಾ ಐದು ದಿನ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಿದ್ದರು. ಈ ವೇಳೆ ಕೋವಿಡ್​ ನಿಯಮ ಉಲ್ಲಂಘಿಸಲಾಗಿದೆ ಎಂದು ಸಮನ್ಸ್​ ಜಾರಿಯಾಗಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಸಮೀಪದ ಸಂಗಮ ಸ್ಥಳದಿಂದ ಆರಂಭವಾಗಿದ್ದ ಪಾದಯಾತ್ರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದಿತ್ತು.
ನ್ಯಾಯಾಲಯದ ಆಕ್ಷೇಪ ಹಾಗೂ ರಾಜ್ಯ ಸರ್ಕಾರದ ವಿರೋಧದ ಹಿನ್ನೆಲೆ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಎರಡು ಹಂತದಲ್ಲಿ ನಡೆಸಿದ್ದರು. ಪಾದಯಾತ್ರೆ ಸಂದರ್ಭ ಅತಿ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಹಿನ್ನೆಲೆ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!