Saturday, March 25, 2023

Latest Posts

ಬಿಬಿಸಿ ಮೇಲೆ ಐಟಿ ದಾಳಿ: ವಿನಾಶ ಕಾಲೇ ವಿಪರೀತ ಬುದ್ಧಿ ಎಂದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಬಿಸಿ ಸಂಸ್ಥೆಯ ದೆಹಲಿ ಹಾಗೂ ಮುಂಬೈ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ಕುರಿತು ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ‘ವಿನಾಶ ಕಾಲೇ ವಿಪರೀತ ಬುದ್ಧಿ’ ಎಂದು ಟೀಕಿಸಿದೆ.

ಬಿಬಿಸಿ ಸಂಸ್ಥೆ (British Broadcasting Company) ಮೇಲಿನ ಐಟಿ ದಾಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು, ಉದ್ಯಮಿ ಅದಾನಿ ಸಮೂಹದ ಹಗರಣದ ಬಗ್ಗೆ ನಾವು ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಿ ಎಂದು ಕೇಳಿದರೆ, ಅವರು ಬಿಬಿಸಿ ಮೇಲೆ ಐಟಿ ದಾಳಿ ಮಾಡುತ್ತಾರೆ ಟೀಕಿಸಿದ್ದಾರೆ.

ಆದಾಯ ತೆರಿಗೆಗೆ ಮತ್ತು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಐಟಿ ತಪಾಸಣೆ ನಡೆಸಲಾಗಿದೆ ಎಂದು ಐಟಿ ಇಲಾಖೆ ಮೂಲಗಳು ಮಾಹಿತಿ ನೀಡಿದೆ. ದಿಢೀರ್ ದಾಳಿ ವೇಳೆ ದೆಹಲಿ ಹಾಗೂ ಮುಂಬೈ ಕಚೇರಿಯಲ್ಲಿನ ಸಿಬ್ಬಂದಿಯ ಮೊಬೈಲ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!