ಡಿ.ಕೆ.ಶಿವಕುಮಾರ್‌ ಆಪ್ತ ಕೆಂಪರಾಜು ನಿವಾಸದ ಮೇಲೆ‌ IT ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆದಾಯ ತೆರಿಗೆ ಅಧಿಕಾರಿಗಳು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್ ಆಪ್ತ ಕೆಂಪರಾಜು ನಿವಾಸದ ಮೇಲೆ‌ ದಾಳಿ (IT Raid) ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ನಗರದ ಕನಕಪುರ ರಸ್ತೆಯ ವಾಜರ ಹಳ್ಳಿಯಲ್ಲಿರುವ ನಿವಾಸದ ಮೇಲೆ‌ ಐಟಿ ದಾಳಿ ನಡೆದಿದೆ.

ಈ ಹಿಂದೆ ಯುವ ಕಾಂಗ್ರೆಸ್ ಚುನಾವಣೆ ಕೆಂಪರಾಜು ಸ್ಪರ್ಧಿಸಿದ್ದರು. ಕನಕಪುರ ಮೂಲದ ಕೆಂಪರಾಜು ಗ್ರಾನೈಟ್, ಕ್ರಷರ್ ಸೇರಿದಂತೆ ಹಲವು ಬ್ಯುಸಿನೆಸ್ ಹೊಂದಿದ್ದಾರೆ. ಇವರ ನಿವಾಸದ‌ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!