ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯನವರೇ, ರಾಜ್ಯದಲ್ಲಿ ಎಷ್ಟು ದಿನ ಮುಖ್ಯಮಂತ್ರಿಗಳಾಗಿ ಸಿಎಂ ಕುರ್ಚಿಯಲ್ಲಿ ಕೂತಿದ್ದೀರಿ ಎಂಬುದು ಮುಖ್ಯವಲ್ಲ. ಆ ಕುರ್ಚಿಯಲ್ಲಿ ಕೂತಾಗ ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದು ಅತ್ಯಂತ ಮುಖ್ಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳೇ, ಮನೆ ಮುರಿಯುವ ಕೆಲಸ ಮಾಡುವುದು ಸುಲಭ. ಮನೆ ಕಟ್ಟುವುದು ಅತ್ಯಂತ ಕಷ್ಟದ ಕೆಲಸ ಎಂದು ತಿಳಿಸಿದರು. ರಾಜ್ಯದ ಜನರು ನಿಮಗೆ ಆಶೀರ್ವಾದ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದಿದ್ದಾರೆ. ಈ ರಾಜ್ಯದ ಎಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯಗಳು, ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡುವ ಅಪೇಕ್ಷೆ ಜನರಲ್ಲಿತ್ತು ಎಂದು ತಿಳಿಸಿದರು. ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರವು ಶೋಷಿತರಿಗೆ ನ್ಯಾಯ ನೀಡುವ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಕಿಡಿಕಾರಿದ್ದಾರೆ.