ನಾನು ಚಾಕೊಲೇಟ್ ಖರೀದಿಸದಿದ್ದರೂ ಪರವಾಗಿಲ್ಲ: ಪಾಕೆಟ್ ಮನಿಯನ್ನು ಟರ್ಕಿ ಭೂಕಂಪ ಸಂತ್ರಸ್ತರಿಗೆ ನೀಡಿದ 9ರ ಬಾಲಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭೂಕಂಪದಿಂದ ಸಂಪೂರ್ಣ ಟರ್ಕಿ ತತ್ತರಿಸಿದ್ದು, ಭಾರತ ಸಹಿತ ಅನೇಕ ದೇಶಗಳು ನೆರವಿಗೆ ಧಾವಿಸಿದೆ.

ಅನೇಕ ವ್ಯಕ್ತಿಗಳು ಕೂಡ ಸಹಾಯದ ಹಸ್ತ ಚಾಚಿದ್ದು, ವಿವಿಧ ರೀತಿಯಲ್ಲಿ ಬೆಂಬಲಕ್ಕೆ ನಿಂತಿದ್ದಾರೆ. ಇದೀಗ 9 ವರ್ಷ ವಯಸ್ಸಿನ ಬಾಲಕನೊಬ್ಬ, ತಾನು ಕೂಡಿಟ್ಟಿದ್ದ ಹಣವನ್ನು ಟರ್ಕಿ ಭೂಕಂಪದಿಂದ (Turkey Earthquake) ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗಾಗಿ ನೀಡಿ ಗಮನ ಸೆಳೆದಿದ್ದಾನೆ.

ಬಾಲಕ ಭೂಕಂಪದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ಮಾಡುವ ಇಂಗಿತವನ್ನು ತನ್ನ ತಾಯಿಯೊಂದಿಗೆ ವ್ಯಕ್ತಪಡಿಸಿದ್ದ. ತಾನು ಕೂಡಿಟ್ಟಿದ್ದ ಹಣವನ್ನು ಸಂತ್ರಸ್ತರಿಗಾಗಿ ನೀಡಿದ್ದಾನೆ

ಡಜ್‌ನಲ್ಲಿ ಭೂಕಂಪವಾದಾಗ ನಾನು ತುಂಬಾ ಹೆದರುತ್ತಿದ್ದೆ. ನಮ್ಮ ಅನೇಕ ನಗರಗಳಲ್ಲಿ ಉಂಟಾಗುವ ಭೂಕಂಪನದ ಬಗ್ಗೆ ಕೇಳಿದಾಗ ನನಗೆ ಅದೇ ಭಯವಿತ್ತು. ಅದಕ್ಕೆ ಹಿರಿಯರು ಕೊಡುವ ಪಾಕೆಟ್ ಮನಿಯನ್ನು ಅಲ್ಲಿನ ಮಕ್ಕಳಿಗೆ ಕಳುಹಿಸಲು ನಿರ್ಧರಿಸಿದೆ ಎಂದು ಬಾಲಕ ತಿಳಿಸಿದ್ದಾನೆ.

ನಾನು ಚಾಕೊಲೇಟ್ ಖರೀದಿಸದಿದ್ದರೂ ಪರವಾಗಿಲ್ಲ. ಅಲ್ಲಿನ ಮಕ್ಕಳು ಚಳಿ ಮತ್ತು ಹಸಿವಿನಿಂದ ಇರಬಾರದು. ಅಲ್ಲಿನ ಮಕ್ಕಳಿಗೆ ನನ್ನ ಬಟ್ಟೆ, ಆಟಿಕೆಗಳನ್ನು ಕಳುಹಿಸುತ್ತೇನೆ ಎಂದು ಬಾಲಕ ಹೇಳಿದ್ದಾನೆ.

ಕಳೆದ ವರ್ಷ ನವೆಂಬರ್‌ನಲ್ಲಿ ವಾಯುವ್ಯ ಡಜ್ ಪ್ರಾಂತ್ಯದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದ ಸಂದರ್ಭದಲ್ಲಿ ಬಾಲಕನನ್ನು ರಕ್ಷಿಸಲಾಗಿತ್ತು. ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರೆಸಿಡೆನ್ಸಿ (ಎಎಫ್‌ಎಡಿ) ಸ್ಥಾಪಿಸಿದ್ದ ಟೆಂಟ್‌ನಲ್ಲಿ ಬಾಲಕನ ಆರೈಕೆ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!