ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ಎದುರು ಸೋಲುತ್ತಿದಂತೆ ಪ್ಲೇ ಆಫ್ ಕನಸಿಗೆ ಬಹುತೇಕ ಎಳ್ಳುನೀರು ಬಿಟ್ಟಿದೆ. ಹಾಗಂತ ಅಧಿಕೃತವಾಗಿ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿಲ್ಲ.
ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇದೀಗ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 7 ಪಂದ್ಯಗಳನ್ನು ಸೋಲುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿಯೇ ಉಳಿದುಕೊಂಡಿದೆ. ಆಡಿದ ಒಂಬತ್ತು ಪಂದ್ಯಗಳ ಪೈಕಿ ಧೋನಿ ಪಡೆ ಕೇವಲ ಎರಡು ಪಂದ್ಯಗಳನ್ನಷ್ಟೇ ಜಯಿಸಿದೆ.
ಒಂದು ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇ ಆಫ್ ಪ್ರವೇಶಿಸಬೇಕಿದ್ದರೇ ಇನ್ನುಳಿದ ಐದಕ್ಕೆ ಐದೂ ಪಂದ್ಯಗಳನ್ನು ಗೆಲ್ಲಬೇಕಿದೆ. ಜತೆಗೆ ಲಕ್ ಕೂಡಾ ಕೈಹಿಡಿಯಬೇಕಿದೆ. ಇನ್ನುಳಿದ 5 ಪಂದ್ಯಗಳನ್ನು ಜಯಿಸಿದರೆ, ಸಿಎಸ್‌ಕೆ ಬಳಿ 14 ಅಂಕಗಳು ಆಗಲಿವೆ. ಹೀಗಾಗಿ ಉಳಿದ ತಂಡಗಳು 14ಕ್ಕಿಂತ ಹೆಚ್ಚು ಅಂಕ ಕಲೆಹಾಕದೇ ಹೋದರೆ, ಸಿಎಸ್‌ಕೆ ಪ್ಲೇ ಆಫ್‌ಗೇರುವ ಚಾನ್ಸ್ ಹೆಚ್ಚಾಗಲಿದೆ.
ಆದರೆ ಧೋನಿ ಪಡೆಯ ಇನ್ನೊಂದು ಸೋಲು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇ ಆಫ್ ಕನಸು ನುಚ್ಚುನೂರಾಗುವುದಂತು ಸತ್ಯ.