ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾರು ಏನು ಹೇಳಿದ್ರು ಎಂಬುದು ಮುಖ್ಯವಲ್ಲ. ನಾನು ಹೇಳುತ್ತಿದ್ದೇನೆ, ಉದಯಗಿರಿ ಗಲಭೆಯಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಸಚಿವ ಕೆಎಸ್ ರಾಜಣ್ಣ ಹೇಳಿಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ರಾಜಣ್ಣ ಅವರ ಮಾತಿಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. ಪೊಲೀಸರದ್ದು ತಪ್ಪಿಲ್ಲ, ಪೊಲೀಸರು ಅನಾಹುತ ತಪ್ಪಿಸಿದ್ದಾರೆ ಎಂದರು.
ಕಲ್ಲು ಎಸೆದಿರುವವರೆಲ್ಲರೂ 14, 15 ವರ್ಷದ ಹುಡುಗರು. ಪೊಲೀಸರು ಗಲಭೆ ಮಾಡಿದವರ ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅರೆಸ್ಟ್ ಮಾಡುತ್ತಾರೆ ಎಂದು ಹೇಳಿದ್ದಾರೆ.