ಹೊಸದಿಗಂತ ಡಿಜಿಟಲ್ ಡೆಸ್ಕ್:
ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಉದ್ಯಮಿ ಮತ್ತು ಬೆಂಗಾಲಿಯ ಖಾಸಗಿ ಸುದ್ದಿ ವಾಹಿನಿಯ ಸಿಇಒ ಕೌಸ್ತವ್ ರಾಯ್ ಅವರ ಕಚೇರಿ ಮತ್ತು ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಇಡಿ ಮತ್ತು ಐಟಿ ಅಧಿಕಾರಿಗಳ ತಂಡ ಏಕಾಏಕಕ್ಕೆದಾಳಿ ಶಾಕ್ ನೀಡಿದ್ದು, ಆದರೆ, ಇದಕ್ಕೆ ಕಾರಣವೇನು ಎಂಬುವುದು ಇನ್ನೂ ಗೊತ್ತಾಗಿಲ್ಲ.
ಕಂಪ್ಯೂಟರ್, ಸಾಫ್ಟ್ವೇರ್ ಮತ್ತು ಮಾಧ್ಯಮ ಸೇರಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ರಾಯ್ ಸಾಕಷ್ಟು ಸುದ್ದಿಯಾಗಿದ್ದರು. ಕಲ್ಯಾಣ ಮತ್ತು ಅಭಿವೃದ್ಧಿ ಯೋಜನೆಗಳ ಕುರಿತಂತೆ ಸರ್ಕಾರ ಯೋಜನೆ ಮತ್ತು ಮೇಲ್ವಿಚಾರಣೆಗಾಗಿ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಯ ಅಧ್ಯಕ್ಷರನ್ನಾಗಿ ರಾಯ್ ಅವರನ್ನು ನೇಮಕ ಮಾಡಿದ್ದು, ಚರ್ಚೆಗೆ ಗ್ರಾಸವಾಗಿತ್ತು. ಇದಾದ ನಂತರ ಆಗಿನ ರಾಜ್ಯಪಾಲ ಜಗದೀಶ್ ಧನಕರ್ ಅವರು ರಾಯ್ರನ್ನು ವಜಾ ಮಾಡಿದ್ದರು.
ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ಗಳಿಗೆ 515 ಕೋಟಿ ರೂ. ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.