Thursday, June 30, 2022

Latest Posts

ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ: ಸಂಸದ ಬಿ.ವೈ.ರಾಘವೇಂದ್ರ

ಹೊಸ ದಿಗಂತ ವರದಿ, ಶಿವಮೊಗ್ಗ:

ಮೂರು ಬಾರಿ ಸಂಸದನಾಗಿ ಆಯ್ಕೆಯಾಗಲು ಜನರು ಆಶೀರ್ವಾದ ಮಾಡಿದ್ದಾರೆ. ಹಾಗಾಗಿ ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಸೋಮವಾರ ಶಿರಸಿಗೆ ಹೋಗಿದ್ದಾಗ ಕೆಲ ಮಾಧ್ಯಮದವರು ರಾಜ್ಯ ರಾಜಕಾರಣದ ಬಗ್ಗೆ ಪ್ರಶ್ನಿಸಿದ್ದರು. ಆಗಲೂ ಸಂಘಟನೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದೆ. ಆದರೆ ಶಾಸಕನಾಗಿ ಒಂದು ತಾಲೂಕಿಗೆ ಸೀಮಿತವಾಗಿ ಕೆಲಸ ಮಾಡುವುದಕ್ಕಿಂತ 8 ತಾಲೂಕುಗಳ ಸೇವೆ ಮಾಡಲು ಅವಕಾಶ ದೊರೆತಿದೆ. ಹಾಗಾಗಿ ರಾಜ್ಯ ರಾಜಕಾರಣಕ್ಕೆ ಮರಳುವ ಆಸಕ್ತಿ ಹೊಂದಿಲ್ಲ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬೊಮ್ಮಾಯಿ ಸಂಪುಟದಲ್ಲಿ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕಲ್ಪಿಸುವಂತೆ ಎಲ್ಲಿಯೂ ಕೇಳಿಲ್ಲ. ಇದು ಸತ್ಯಕ್ಕೆ ದೂರವಾದ ಸಂಗತಿ. ವಿಜಯೇಂದ್ರ ಕೂಡಾ ಇಂತಹ ಪ್ರಸ್ತಾಪ ಇರಿಸಿಲ್ಲ. ಸಂಘಟನೆ ಅವರಿಗೆ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ಎಲ್ಲರೂ ಕೆಲಸ ಮಾಡುತ್ತಿದ್ದಾರೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss