ಇಂಧನ ದರ ಇಳಿಕೆ ವಿಚಾರವಾಗಿ ದೇಶದ ಜನತೆಗೆ ಮೋದಿ ಸಂದೇಶವೇನು..?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದಲ್ಲಿ ಪೆಟ್ರೋಲ್ ಬೆಲೆ ಇಳಿಕೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಸಂಜೆ ಟ್ವೀಟ್ ಮಾಡಿದ್ದಾರೆ. ಸರ್ಕಾರ ಕೈಗೊಳ್ಳುವ ನಿರ್ಧಾರಗಳಿಂದ ಜನ‌ರ ಜೀವನ ಸುಧಾರಿಸುತ್ತದೆ ಎಂದು ಅಭಿಪ್ರಾಯಪಟ್ಟರು. “ದೇಶದ ಜನತೆ ನಮ್ಮ ಮೊದಲ ಆದ್ಯತೆ. ಇಂದು ಕೈಗೊಂಡ ನಿರ್ಧಾರಗಳು.. ವಿಶೇಷವಾಗಿ ಪೆಟ್ರೋಲ್‌, ಡಿಸೇಲ್ ಬೆಲೆ ಇಳಿಕೆ ವಿವಿಧ ವಲಯಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ. ಇದು ಜನರ ಜೀವನವನ್ನು ಸುಲಭಗೊಳಿಸುತ್ತದೆ” ಎಂದು ಮೋದಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ ಮಾಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 8 ರೂ, ಡೀಸೆಲ್ ದರದಲ್ಲಿ 6 ರೂ. ಇಳಿಕೆ ಮಾಡಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರೊಂದಿಗೆ ಲೀಟರ್ ಪೆಟ್ರೋಲ್ ಬೆಲೆ 9.50 ರೂ.ಗೆ ಇಳಿದರೆ, ಡೀಸೆಲ್ ಬೆಲೆ 7 ರೂ.ಗೆ ಇಳಿಯುವ ಸಾಧ್ಯತೆ ಇದೆ.

ಮತ್ತೊಂದೆಡೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನೂ ಭಾರಿ ಇಳಿಕೆ ಮಾಡಿದೆ. ಪ್ರತಿ ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ನಿರ್ಧರಿಸಿದೆ. ವರ್ಷಕ್ಕೆ ಹನ್ನೆರಡು ಸಿಲಿಂಡರ್‌ಗಳಿಗೆ ಅನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!