November 24, 2026
Tuesday, November 24, 2026
spot_img

ಇಲ್ಲೂ ಕಿರಿಕಿರಿ ಆಗುತ್ತಿದೆ, ನಿದ್ದೆ ಬರುತ್ತಿಲ್ಲ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಿ ಎಂದು ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್‌ ಬದಲಾವಣೆ ಮಾಡಿ ಎಂದು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಬ್ಯಾರಕ್‌ನಲ್ಲಿ ವಿದೇಶಿ ಪ್ರಜೆಗಳಿದ್ದಾರೆ, ಎಲ್ಲರೂ ಸೇರಿ 30 ಮಂದಿ ವಿಚಾರಣಾಧೀನ ಕೈದಿಗಳಿದ್ದಾರೆ. ಮಧ್ಯರಾತ್ರಿವರೆಗೂ ನಿದ್ದೆ ಮಾಡಲು ಆಗುತ್ತಿಲ್ಲ. ತುಂಬಾ ಕಿರಿಕಿರಿ ಆಗುತ್ತಿದೆ. ಜೈಲಿನಲ್ಲಿ ಸಣ್ಣ ನೆಮ್ಮದಿಯೂ ಇಲ್ಲದಂತಾಗಿದೆ. ಖುದ್ದು ನ್ಯಾಯಾಧೀಶರೇ ಜೈಲಿಗೆ ಆಗಮಿಸಿ ಪರಿಶೀಲನೆ ನಡೆಸಬೇಕು ಎಂದು ಕೋರಿಕೊಂಡಿದ್ದಾರೆ.

ಈ ಹಿಂದೆ ಕೂಡ ಹಲವು ಬಾರಿ ಬ್ಯಾರಕ್ ಬದಲಾವಣೆ ಮಾಡುವಂತೆ ಪವಿತ್ರಾಗೌಡ ನ್ಯಾಯಾಧೀಶರನ್ನು ಕೋರಿದ್ದರು. ಆಗ ಜೈಲಿನ ಮ್ಯಾನ್ಯುಯಲ್ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚಿಸಿದ್ದರು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪವಿತ್ರಾಗೌಡ ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ವರದಿ ಸಲ್ಲಿಸುವಂತೆ ನ್ಯಾಯಾಧೀಶರು ಜೈಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Must Read