ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ: ಎನ್‌.ರವಿಕುಮಾರ್

ಹೊಸದಿಗಂತ ವರದಿ ಕಲಬುರಗಿ:‌

ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯ ನಡೆಯುತ್ತಿದ್ದು, ಈ ಬಾರಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಯರ್ ಹಾಗೂ ಉಪ ಮೇಯರ್ ನಮ್ಮ ಪಕ್ಷದವರೆ ಆಗಲಿದ್ದು, ಹಲವು ವಷ೯ಗಳ ನಂತರ ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ ಪಕ್ಷ ಗದ್ದುಗೆ ಏರಲಿದೆ ಎಂದರು.

ಚುನಾವಣೆಗೂ ಮುಂಚೇ ಕಾಂಗ್ರೆಸ್ ಸೋಲು ಒಪ್ಪಿಕೊಂಡಿದ್ದಾರೆ. ಹೀಗಾಗಿ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣಾ ಮತದಾನಕ್ಕೆ ಗೈರಾಗಿದ್ದಾರೆ. ಕನಿಷ್ಠ ಮೂರು ಅಥವಾ ನಾಲ್ಕು ಮತಗಳ ಅಂತರದಿಂದ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ .

ಈ ಸಂದರ್ಭದಲ್ಲಿ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಚಂದು ಪಾಟೀಲ್ ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!