ಈ ಬಾರಿ 123 ಕ್ಷೇತ್ರಗಳಲ್ಲಿ ಗೆದ್ದು ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ನಿಖಿಲ್ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್ ಈ ಬಾರಿ ಮಹತ್ವಾಕಾಂಕ್ಷಿ ಯೋಜನೆಗಳನ್ನು ಇರಿಸಿಕೊಂಡು ಚುನಾವಣೆಗೆ ದುಮುಕಿದೆ.ಪಕ್ಷದ ರಾಜ್ಯಾಧ್ಯಕ್ಷರಾದ ಕುಮಾರಣ್ಣ ಅವರು ಪಂಚರತ್ನ ಯಾತ್ರೆ ಮೂಲಕ ಹಳ್ಳಿ ಹಳ್ಳಿಗೂ ತೆರಳಿ ಮತದಾರರ ಮನದಾಳ ಅರಿತಿದ್ದಾರೆ. ಜನತೆಯ ಆಶೋತ್ತರ ಈಡೇರಿಕೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನಮ್ಮ ಸರಕಾರ ಬಂದರೆ ನೀಡಲಾಗುವುದು ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಂಗಳವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜನತೆಯ ಅಭಿವೃದ್ಧಿಗೆ ಬೇಕಾದ ಪಂಚ ಯೋಜನೆಗಳನ್ನು ನುಷ್ಠಾನಗೊಳಿಸಲಾಗುವುದು ಎಂಬ ಭರವಸೆಯನ್ನು ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಜನತೆಯ ಮುಂದಿರಿಸಿದ್ದಾರೆ. ಈ ಬಾರಿ ೧೨೩ ಕ್ಷೇತ್ರಗಳಲ್ಲಿ ಪಕ್ಷದ ಗೆಲುವಿಗೆ ರಾಜ್ಯಾಧ್ಯಾಕ್ಷರು ಅವಿರತವಾಗಿ ಶ್ರಮಿಸುತ್ತಿದ್ದಾರೆ.ಜನತೆಯು ಕೂಡಾ ಹೆಚ್ಚಿನ ಬೆಂಬಲ ವ್ಯಕ್ತ ಪಡಿಸುತ್ತಿದ್ದಾರೆ.ಈ ಬಾರಿ ಸ್ಪಷ್ಟ ಬಹುಮತದಿಂದ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ.ಭಗವಂತನ ಕೃಪೆ ಮತ್ತು ಜನತೆಯ ಆಶೀರ್ವಾದದಿಂದ ಈ ಬಾರಿ ಜೆಡಿಎಸ್ ಏಕಾಂಗಿಯಾಗಿ ಸರಕಾರ ನಡೆಸುವ ವಿಶ್ವಾಸ ನಮ್ಮದಾಗಿದೆ.ಈ ಬಾರಿ ೧೨೩ ಕ್ಷೇತ್ರಗಳಲ್ಲಿ ಜಯ ಸಾಧಿಸಿ ಜೆಡಿಎಸ್ ಅಧಿಕಾರಕ್ಕೇರಲಿದೆ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಕಳೆದ ಎರಡು ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿ ಕುಮಾರಸ್ವಾಮಿ ಅವರು ಈಡೇರಿಸಿದ ಜನಹಿತ ಕಾರ್ಯಗಳು ಜನತೆಯ ಮುಂದಿರಿಸಿದ್ದೇವೆ.ಈ ಕಾರ್ಯಗಳನ್ನು ಮುಂದುವರೆಸುವ ನಿಟ್ಟಿನಲ್ಲಿ ಈ ಬಾರಿ ಕರ್ನಾಟಕದ ಜನತೆ ಜೆಡಿಎಸ್‌ಗೆ ಅಭೂತಪೂರ್ವ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ನಮ್ಮದಾಗಿದೆ ಎಂದರು.

ಸ್ವಂತ ಬಲದಲ್ಲಿ ಸರಕಾರ
ನಿನ್ನೆ ನಾಮಪತ್ರ ಸಲ್ಲಿಸಿದ್ದೇನೆ.ಇಂದು ಭಗವಂತನ ಆಶೀರ್ವಾದ ಪ್ರಧಾನವಾಗಿರುವುದರಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವರ ಆಶೀರ್ವಾದ ಪಡೆದಿದ್ದೇನೆ.ದೇಶದಲ್ಲಿ ಮತ್ತು ರಾಷ್ಟ್ರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಆಡಳಿತ ನಡೆಸಲು ಅವಕಾಶ ಮಾಡಿ ಕೊಟ್ಟಿದ್ದಾರೆ.ಆದರೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಸ್ವಂತ ಬಲದಲ್ಲಿ ಸರಕಾರ ನಡೆಸಲು ಇಷ್ಟರ ತನಕ ಅವಕಾಶ ದೊರಕಿಲ್ಲ ಈ ಬಾರಿ ಈ ಅವಕಾಶವನ್ನು ಜನತೆ ಮಾಡಿಕೊಡುತ್ತಾರೆ ಎಂಬ ಆಶಾವಾದ ನಮ್ಮದು.ಕೇವಲ ೩೪ ತಿಂಗಳು ಆಡಳಿತ ನಡೆಸಿ ಕುಮಾರಣ್ಣ ಅವರು ನೀಡಿದ ಜನಹಿತ ಯೋಜನೆಗಳು ಇಂದಿಗೂ ಜನತೆಯ ಮನದಲ್ಲಿ ಹಸಿರಾಗಿ ಉಳಿದಿದೆ ಆದುದರಿಂದ ಈ ಬಾರಿ ಜನತೆ ಜೆಡಿಎಸ್ ಅನ್ನು ಬೆಂಬಲಿಸುತ್ತಾರೆ ಎಂದು ನುಡಿದರು.

ಕಹಿ ಅನುಭವ ಆಗಿದೆ
ಒಂದು ಬಾರಿ ಕಾಂಗ್ರೆಸ್ ಜೊತೆಗೆ ಒಂದು ಬಾರಿ ಬಿಜೆಪಿ ಜತೆಗೆ ಸಮ್ಮಿಶ್ರ ಸರಕಾರ ಮಾಡಿದ್ದೇವೆ.ಇದರಿಂದ ಎರಡೂ ಕಡೆಗಳಿಂದಲೂ ಸಾಕಷ್ಟು ಕಹಿ ಅನುಭವಗಳನ್ನು ಅನುಭವಿಸಿದ್ದೇವೆ.ಆದುದರಿಂದ ಈ ಬಾರಿ ಸಮ್ಮಿಶ್ರ ಸರಕಾರ ಬೇಡ ಜನತೆ ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ನೀಡಿ ಬಹುಮತ ಬರುವಂತೆ ಮಾಡಲಿ ಎಂಬುದಾಗಿ ಭಗವಂತನಲ್ಲಿ ಪ್ರಾರ್ಥಿಸಿದ್ದೇನೆ.ಜನತಾ ದಳವು ಮಂಡ್ಯದಲ್ಲಿ ೭ಕ್ಕೆ ೭ ಸ್ಥಾನವನ್ನು ಮತ್ತು ರಾಮನಗರದಲ್ಲಿ ಕನಿಷ್ಟ ಪಕ್ಷ ೪ ರಲ್ಲಿ ಮೂರು ಸ್ಥಾನಗಳನ್ನು ಪಡೆಯಲಿದೆ.ಮೈಸೂರಿನಲ್ಲಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ.ಈ ಹಿಂದಿನಂತೆ ಮಂಡ್ಯ, ರಾಮನಗರ ಮತ್ತು ಮೈಸೂರು ಭಾಗದಲ್ಲಿ ಅತೀ ಹೆಚ್ಚು ಸ್ಥಾನವನ್ನು ಜೆಡಿಎಸ್ ಪಡೆಯಲಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!