ಪಕ್ಷಕ್ಕೆ ಬದ್ಧರಾಗಿರುತ್ತೇವೆ ಎನ್ನುವುದು ಇತ್ತೀಚಿನ ದಿನಗಳಲ್ಲಿ ಕಷ್ಟ, ಹಿಂಗ್ಯಾಕಂದ್ರು ಪರಂ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚಿನ ದಿನಗಳಲ್ಲಿ ಪಕ್ಷಕ್ಕೆ ಬದ್ಧರಾಗಿರುತ್ತೇವೆ ಎನ್ನುವುದು ಕಷ್ಟ. ಪಕ್ಷಾಂತರವನ್ನು ತಡೆಯಲು ಸಾಧ್ಯವಿಲ್ಲ. ಕಾನೂನಿನಲ್ಲಿ ನಿಷೇಧಿಸದರೆ ಮಾತ್ರ ಪಕ್ಷಾಂತರ ನಿಲ್ಲುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ, ರಾಜಕೀಯದಲ್ಲಿ ಶಾಶ್ವತ ಶತ್ರುಗಳು ಅಥವಾ ಮಿತ್ರರು ಇಲ್ಲ. ಇತ್ತೀಚೆಗೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಇಂತಹುದೇ ಬೆಳವಣಿಗೆಗಳು ನಡೆದಿವೆ. ಪಕ್ಷ ನಿಷ್ಠರು ಕೆಲವರು ಇದ್ದಾರೆ. ಪಕ್ಷಾಂತರವನ್ನು ತಡೆಯಲಾಗದು. ಕಾನೂನಿನಲ್ಲಿಯೂ ಪಕ್ಷಾಂತರಕ್ಕೆ ಅವಕಾಶವಿದೆ ಎಂದರು.

ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ಅವರನ್ನು ಚನ್ನಪಟ್ಟಣದಿಂದ ಅಧಿಕೃತ ಅಭ್ಯರ್ಥಿ ಎಂದು ಹೈಕಮಾಂಡ್ ಘೋಷಿಸಿದೆ. ಇದರಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಬಲ ಬರಲಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!