ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಅವರ ನಿಧನದ ಹಿನ್ನೆಲೆ ಮಾಜಿ ಪ್ರೇಯಸಿ ಸಿಮಿ ಗರೆವಾಲ್ ಭಾವುಕ ಪೋಸ್ಟ್ ಮಾಡಿದ್ದಾರೆ. ಭಾರತದ ರತ್ನ ಎಂದು ಕರೆಯಲ್ಪಡುವ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಫೋಟೊವೊಂದನ್ನು ಅವರು ಹಂಚಿಕೊಂಡಿದ್ದಾರೆ, ನೀವು ಹೋಗಿದ್ದೀರೆಂದು ಎಲ್ಲರೂ ಹೇಳುತ್ತಿದ್ದಾರೆ, ನೀವು ನಮ್ಮ ಜತೆ ಇಲ್ಲ ಎನ್ನುವ ಸತ್ಯವನ್ನು ಅರಗಿಸಿಕೊಳ್ಳುವುದು ತುಂಬಾ ಕಷ್ಟ, ಹೋಗಿಬನ್ನಿ ನನ್ನ ಸ್ನೇಹಿತ ಎಂದು ಬರೆದಿದ್ದಾರೆ. ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರೊಂದಿಗಿನ ಸಂಬಂಧದ ಬಗ್ಗೆ 2011 ರಲ್ಲಿ ನೀಡಿದ ಸಂದರ್ಶನದಲ್ಲಿ ಖ್ಯಾತ ಹಿಂದಿ ಸಿನಿಮಾ ನಟಿ ಸಿಮಿ ಸ್ವತಃ ಬಹಿರಂಗಪಡಿಸಿದ್ದರು.
They say you have gone ..
It’s too hard to bear your loss..too hard.. Farewell my friend..#RatanTata pic.twitter.com/FTC4wzkFoV— Simi_Garewal (@Simi_Garewal) October 9, 2024